ಕಾಂಗ್ರೆಸ್‌ ಶಾಸಕರಾರೂ ಬಿಜೆಪಿಗೆ ಸೇರಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನ ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ಹಿಂದೆ ೧೦ ಜನ ಕಾಂಗ್ರೆಸ್‌ನಿಂದ ಬಿಜೆಪಿಗೆ ಬರುತ್ತಾರೆ ಎಂದು ಹೇಳುತ್ತಿದ್ದರು, ಈಗ ಐದು ಶಾಸಕರು ಬರಲಿದ್ದಾರೆ ಎಂದು ಹೇಳುತ್ತಿದ್ದಾರೆ. ಯಾವುದೇ ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಯಾರು ಬಿಜೆಪಿಗೆ ಬರುತ್ತಾರೆ? ಯಾವಾಗ ಬರುತ್ತಾರೆ? ಎಂಬುದನ್ನು ರಮೇಶ ಜಾರಕಿಹೊಳಿ ಅವರೇ ಬಹಿರಂಗಪಡಿಸಬೇಕು. ರಾಜಕೀಯದಲ್ಲಿ ಹೀಗೇ ಆಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅವರ ಪಕ್ಷದಲ್ಲಿಯೇ ಏನೂ ಸರಿ ಇಲ್ಲ, ಮತ್ಯಾರು ಕಾಂಗ್ರೆಸ್‌ನವರು ಅಲ್ಲಿಗೆ ಹೋಗುತ್ತಾರೆ ಎಂದು ಸತೀಶ ಪ್ರಶ್ನಿಸಿದರು.
೨೪ ಗಂಟೆಗಳಲ್ಲಿ ಐದು ಕಾಂಗ್ರೆಸ್‌ ಶಾಸಕರನ್ನು ಬಿಜೆಪಿಗೆ ತರುವ ತಾಕತ್ತು ನನಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement