ಕೊರೊನಾ: ಏಳು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

posted in: ರಾಜ್ಯ | 0

ಬೆಂಗಳೂರು,  ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಏಳು ಜಿಲ್ಲೆಗಳಲ್ಲಿ ಒಂದೇ ಒಂದು ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ರಾಜ್ಯದಲ್ಲಿ ಒಂದೇ ದಿನ 438 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ.  24 ಗಂಟೆಗಳಲ್ಲಿ 344 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾ ವೈರಸ್ ಸೋಂಕಿನಿಂದ ಒಂದು ದಿನದಲ್ಲಿ ಆರು ಮಂದಿ ಪ್ರಾಣ ಬಿಟ್ಟಿದ್ದು, ರಾಜ್ಯದಲ್ಲಿ ಈವರೆಗೂ ಮಹಾಮಾರಿಗೆ 12273 ಜನರು ಬಲಿಯಾಗಿದ್ದಾರೆ. ಉಳಿದಂತೆ ಕರ್ನಾಟಕದಲ್ಲಿ 5860 ಕೊವಿಡ್-19 ಸಕ್ರಿಯ ಪ್ರಕರಣಗಳಿರುವುದು ಗೊತ್ತಾಗಿದೆ.

ಏಳು ಜಿಲ್ಲೆಗಳಲ್ಲಿ “ಶೂನ್ಯ” ಪ್ರಕರಣಗಳು ಪತ್ತೆ:

ರಾಜ್ಯದಲ್ಲಿ ಒಟ್ಟು 438 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಒಂದೇ ಒಂದು ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿಲ್ಲ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು 306, ಬೀದರ್ 4, ಚಾಮರಾಜನಗರ 1, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 9, ಚಿತ್ರದುರ್ಗ 11, ದಕ್ಷಿಣ ಕನ್ನಡ 19, ದಾವಣಗೆರೆ 2, ಧಾರವಾಡ 2, ಗದಗ 0, ಹಾಸನ 6, ಹಾವೇರಿ 2, ಕಲಬುರಗಿ 9, ಕೊಡಗು 4, ಕೋಲಾರ 2, ಕೊಪ್ಪಳ 0, ಮಂಡ್ಯ 1, ಮೈಸೂರು 12, ರಾಯಚೂರು 0, ರಾಮನಗರ 0, ಶಿವಮೊಗ್ಗ 4, ತುಮಕೂರು 8, ಉಡುಪಿ 11, ಉತ್ತರ ಕನ್ನಡ 7, ವಿಜಯಪುರ 5, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ಹೊನ್ನಾವರ: ಕರ್ಕಿ ಮಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಗಾಣಗಾಪುರದಲ್ಲಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ