ಟೂಲ್‌ಕಿಟ್ ಡಾಕ್ಯುಮೆಂಟ್‌ನ ಸಂಪಾದಕರಲ್ಲಿ ಒಬ್ಬರಾದ ನಿಕಿತಾ ಜಾಕೋಬ್ ಅವರ ಮನವಿಯ ಮೇರೆಗೆ ಬಾಂಬೆ ಹೈಕೋರ್ಟ್ ತನ್ನ ಆದೇಶವನ್ನು ಬುಧವಾರಕ್ಕೆ ಕಾಯ್ದಿರಿಸಿದೆ.
ಅಲ್ಲಿಯವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.
ರೈತರ ಪ್ರತಿಭಟನೆ ಕುರಿತು ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಹಂಚಿಕೊಂಡಿರುವ “ಟೂಲ್‌ಕಿಟ್” ಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದಾಖಲಿಸಿರುವ ಪ್ರಕರಣದ ಆರೋಪಿ ನಿಕಿತಾ ಜಾಕೋಬ್ ಸೋಮವಾರ ಬಾಂಬೆ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ