ಬೆಂಗಳೂರು: ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದಿಂದ ಹೋರಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿದೆ.
ಕರ್ನಾಟಕ ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗದಿಂದ ತಮ್ಮ ಜನಾಂಗವನ್ನು ಪ್ರವರ್ಗ 2ಎ ಗೆ ಸೇರಿಸುವಂತೆ ಕೋರಿ ಮನವಿಗಳು ಸರ್ಕಾರಕ್ಕೆ ಸಲ್ಲಿಕೆಯಾಗಿವೆ. ರಾಜ್ಯದ ಪಂಚಮಸಾಲಿ ಜನಾಂಗದವರು ತಮ್ಮ ಜನಾಂಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ಹಿಂದುಳಿದಿದೆ. ಸಮಾಜದ ಬಡವರಿಗೆ ತೊಂದರೆಯಾಗಿರುವುದರಿಂದ, ತಮ್ಮ ಜನಾಂಗವನ್ನು ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸಲು ಮನವಿ ಮಾಡಿದ್ದಾರೆ.
ಈ ನಿಟ್ಟಿನಲ್ಲಿ ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಫೆ.೫ರಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಕೋರಿರುತ್ತಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ 1995 ರಡಿಯಲ್ಲಿ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಮೃತಿಗಳ ಬಗ್ಗೆ ಸಮೀಕ್ಷೆ ನಡೆಸುವುದು. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ನಾಗರೀಕರ ವರ್ಗಗಳನ್ನು ಗುರುತಿಸುಂತೆ ಸೂಚಿಸಲಾಗಿದೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |

ನಿಮ್ಮ ಕಾಮೆಂಟ್ ಬರೆಯಿರಿ