ಫೆ.22ರಿಂದ ಶಾಲೆಗಳಲ್ಲಿ ಪೂರ್ಣ ಪ್ರಮಾಣದ ತಗತಿ ಶುರು ಆದರೆ ಕೆಲಭಾಗದಲ್ಲಿ 6-7ನೇ ತರಗತಿ ಆರಂಭವಿಲ್ಲ

 

ಬೆಂಗಳೂರು: ಕೋವಿಡ್​ ಮಾರ್ಗಸೂಚಿಯನ್ವಯ 9 ರಿಂದ ದ್ವಿತೀಯ ಪಿಯುಸಿ ವರೆಗೆ ತರಗತಿಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರ, ಇದೀಗ ಉಳಿದ ತರಗತಿಗಳ ಆರಂಭಕ್ಕೆ ಅನಮತಿ ನೀಡಿದೆ.
ಫೆ.22ರಿಂದ 6ರಿಂದ 8 ನೇ ತರಗತಿ ವರೆಗೆ ಪೂರ್ಣ ಪ್ರಮಾಣದಲ್ಲಿ ತರಗತಿ ಶುರುವಾಗಲಿದೆ. 1ರಿಂದ5 ನೇ ತರಗತಿ ವರೆಗೆ ವಿದ್ಯಾಗಮ ಪ್ರಾರಂಭವಾಗಲಿದೆ.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.​ಸುರೇಶ್​ ಕುಮಾರ್​ ನೇತೃತ್ವದಲ್ಲಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ರಾಜ್ಯ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಜತೆ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆ ಬಳಿಕ ಸಚಿವ ಸುರೇಶ್​ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಫೆ.22ರಿಂದ 6,7 ಮತ್ತು 8ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಪೂರ್ಣ ಪ್ರಮಾಣದ ತರಗತಿ ಆರಂಭ ಆಗಲಿದೆ. ಆದರೆ, ಬೆಂಗಳೂರು ನಗರ ಹಾಗೂ ಕೇರಳ ಗಡಿ ಭಾಗದ ಪ್ರದೇಶಗಳಲ್ಲಿ 6 ಮತ್ತು 7ನೇ ತರಗತಿ ವಿಲ್ಲ. 8ನೇ ತರಗತಿ ಮಾತ್ರ ಆರಂಭ ಆಗಲಿದೆ ಎಂದು ತಿಳಿಸಿದ್ದಾರೆ.
ಮಕ್ಕಳಿಗೆ ಶಾಲಾ ಹಾಜರಾತಿ ಕಡ್ಡಾಯವಿಲ್ಲ. ಆನ್​ಲೈನ್ ತರಗತಿಗಳು ಎಂದಿನಂತೆ ಮುಂದುವರಿಯಲಿದೆ. ಶಾಲೆ ಆರಂಭಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ತಜ್ಞರ ಸಮಿತಿ ಕಟ್ಟು ನಿಟ್ಟಿನ ಸಲಹೆ ನೀಡಿದೆ. ಯಾವುದೇ ಕಾರಣಕ್ಕೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ , ಭೂ ಕುಸಿತದ ಸಾಧ್ಯತೆ ; ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ವರದಿ ಕಾರ್ಡ್‌ ಕಡ್ಡಾಯ. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಹಾಸ್ಟೆಲ್ಗಳು ಆರಂಭವಾಗಲಿವೆ. ವಿದ್ಯಾರ್ಥಿಗಳ ಅಗತ್ಯತೆಗೆ ತಕ್ಕಂತೆ ಹೆಚ್ಚು ಬಸ್​ಗಳನ್ನು ಓಡಿಸಬೇಕೆಂದು ಸಾರಿಗೆ ಇಲಾಖೆಗೆ ಮನವಿ ಮಾಡಲಾಗಿದೆ. ಜಿಲ್ಲೆಗಳಲ್ಲಿ ಮಕ್ಕಳು ಮತ್ತು ಶಿಕ್ಷಕರಿಗೆ ರೇಂಡಮ್‌ ಟೆಸ್ಟ್ ಮಾಡಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ತಜ್ಞರ ಸಮಿತಿಯ ಡಾ.ಸುದರ್ಶನ ಬಲ್ಲಾಳ್ ಸೇರಿ ಸಮಿತಿ ಸದಸ್ಯರು, ಶಿಮೊದಲಾದವರಿದ್ದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement