ರಾಹುಲ್‌ ಗಾಂಧಿ ವಲಸೆ ನಾಯಕ: ಸಚಿವ ಪ್ರಹ್ಲಾದ ಜೋಶಿ ಟೀಕೆ

ಅಮೇಥಿ ಕ್ಷೇತ್ರದ ಜನರು ತಿರಸ್ಕರಿಸಿದ ನಂತರ ಆಶ್ರಯಕ್ಕಾಗಿ ಕೇರಳದ ವೈನಾಡ್‌ಗೆ ಬಂದಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಒಬ್ಬ ವಲಸೆ ನಾಯಕ ಎಂದು ಬಿಜೆಪಿ ಮುಖಂಡ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದ್ದಾರೆ.
ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿದರೆ ಏನನ್ನೂ ಪಡೆಯಲು ಸಾಧ್ಯವಿಲ್ಲ ಎಂಬುದು ಕೇರಳ ಜನರಿಗೆ ಮನವರಿಕೆಯಾಗಿದೆ ಎಂದರು.
ಶಬರಿಮಲೈ ದೇವಸ್ಥಾನದಲ್ಲಿ ಎಲ್ಲ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನೀಡುವ ವಿಷಯದಲ್ಲಿ ರಾಜ್ಯ ಕಾಂಗ್ರೆಸ್‌ ಹಾಗೂ ಕೇಂದ್ರ ಕಾಂಗ್ರೆಸ್‌ ಇಬ್ಬಗೆ ನಿಲುವು ಹೊಂದಿವೆ. ಹಿಂದೂಗಳ ಬಗ್ಗೆ ಕಾಂಗ್ರೆಸ್‌ಗೆ ಯಾವುದೇ ಬದ್ಧತೆ ಇಲ್ಲ ಎಂಬುದು ಇದರಿಂದ ಗೊತ್ತಾಗುತ್ತದೆ. ಶಬರಿಮಲೈ ಕುರಿತು ರಾಹುಲ್‌ ಗಾಂಧಿ ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಕೇರಳದಲ್ಲಿ ಇಸ್ಲಾಮಿಕ್‌ ಮೂಲಭೂತವಾದಿಗಳನ್ನು ಸಮಾಧಾನಪಡಿಸುವಲ್ಲಿ ಕಾಂಗ್ರೆಸ್‌ ತೊಡಗಿದೆ ಎಂದು ಆರೋಪಿಸಿದ ಜೋಶಿ, ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಆಡಳಿತಾರೂಢ ಎಲ್‌ಡಿಎಫ್‌ ಹಾಗೂ ಹಿಂದಿನ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಸರಕಾರಗಳು ವಿಫಲಗೊಂಡಿವೆ ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement