ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಪ್ರಥಮ ದರ್ಜೆ ಸಹಾಯಕ ಹುದ್ದೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಬೆಳಗಾವಿ ಮೂಲದ ಶಿವಲಿಂಗ ಪಾಟೀಲನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬೆಳಗಾವಿಯಲ್ಲಿ ಬಂಧಿಸಲಾಗಿದೆ. ಆರೋಪಿ ಶಿವಲಿಂಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಕಳೆದ ವರ್ಷ ಸೆಂಟರ್ ಮುಚ್ಚಿದ್ದ. ಇನ್ನೊಬ್ಬ ಆರೋಪಿ ರಾಚಪ್ಪನಿಂದ ಪ್ರಶ್ನೆ ಪತ್ರಿಕೆಗಳನ್ನು ತರಿಸಿಕೊಂಡು ಅಭ್ಯರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ ಪಾಟೀಲ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ