ಟೂಲ್‌ಕಿಟ್‌ ಆರೋಪ ನಿಕಿತಾಗೆ ೩ ವಾರಗಳ ನಿರೀಕ್ಷಣಾ ಜಾಮೀನು

ಟೂಲ್‌ಕಿಟ್‌ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ನಿಕಿತಾ ಜೇಕಬ್‌ ಅವರಿಗೆ ಬಾಂಬೆ ಉಚ್ಚ ನ್ಯಾಯಾಲಯ ಮೂರು ವಾರಗಳ ನಿರೀಕ್ಷಣಾ ಜಾಮೀನು ನೀಡಿದೆ.
ನಿಕಿತಾ ವಿರುದ್ಧ ದೆಹಲಿಯಲ್ಲಿ ಜಾಮೀನು ರಹಿತ ವಾರಂಟ್‌ ಹೊರಡಿಸಲಾಗಿದ್ದರಿಂದ ನಿಕಿತಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರಿಗೆ ಸೂಕ್ತ ಪರಿಹಾರ ಪಡೆಯಲು ಹಾಗೂ ನ್ಯಾಯಾಲಯವನ್ನು ಸಂಪರ್ಕಿಸಲು ಮೂರುವಾರಗಳ ನಿರೀಕ್ಷಣಾ ಜಾಮೀನು ನೀಡಲಾಗಿದೆ ಎಂದು ನ್ಯಾಯಪೀಠ ತಿಳಿಸಿದ್ದು, ನಿಕಿತಾ ಅವರ ಮನವಿ ಮೇರೆಗೆ ಉಚ್ಚ ನ್ಯಾಯಾಲಯ ತನ್ನ ಆದೇಶವನ್ನು ಕಾಯ್ದಿರಿಸಿದೆ.
ನಿಕಿತಾ ಟೂಲ್‌ಕಿಟ್‌ ರಚನೆ ಮಾಡಿದವರಲ್ಲೊಬ್ಬರಾಗಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.
ಜಾಕೋಬ್ ಪರವಾಗಿ ಹಿರಿಯ ವಕೀಲ ಮಿಹಿರ್ ದೇಸಾಯಿ ವಾದ ಮಾಡಿದರು. ಟೂಲ್ಕಿಟ್ ಯಾವುದೇ ಹಿಂಸಾಚಾರದ ಬಗ್ಗೆ ಅಥವಾ ಕೆಂಪು ಕೋಟೆ ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಹೇಳುವುದಿಲ್ಲ ಎಂದು ವಾದಿಸಿದ ದೇಸಾಯಿ, ರೈತರನ್ನು ಬೆಂಬಲಿಸಲು ಮಾತ್ರ ಇದನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ತಿಹಾರ್ ಜೈಲಿನಲ್ಲಿ ವಿಶೇಷ ಸೌಲಭ್ಯ ಪಡೆಯಲು ಅಧಿಕೃತ ಸ್ಥಾನ ದುರುಪಯೋಗಪಡಿಸಿಕೊಂಡ ಸತ್ಯೇಂದ್ರ ಜೈನ್ : ತನಿಖಾ ಸಮಿತಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement