ಪಂಜಾಬ್‌ ಸ್ಥಳಿಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ಗೆ ಭಾರಿ ಗೆಲುವು

ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಚುನಾವಣೆ ನಡೆದ ೮ ಪುರಸಭೆಗಳಲ್ಲಿ ೭ರಲ್ಲಿ ಜಯಭೇರಿ ಬಾರಿಸಿದೆ.
ಮೊಗಾ, ಹೋಶಿಯಾರ್‌ಪುರ್, ಕಪುರ್ಥಲಾ, ಅಬೋಹರ್, ಪಠಾಣ್‌ಕೋಟ್, ಬಟಾಲಾ, ಮತ್ತು ಬಟಿಂಡಾ ಎಂಬ ಏಳು ನಿಗಮಗಳ ಫಲಿತಾಂಶಗಳನ್ನು ಬುಧವಾರ ಘೋಷಿಸಲಾಗಿದ್ದು, ಕಾಂಗ್ರೆಸ್ ಸ್ಪಷ್ಟವಾಗಿ ಬಹುಮತ ಪಡೆದುಕೊಂಡಿದೆ. ಬಿಜೆಪಿ, ಶಿರೋಮಣಿ ಅಕಾಲಿದಳ ಹಾಗೂ ಆಮ್‌ ಆದ್ಮಿ ಪಕ್ಷಗಳು ಮುಖಭಂಗ ಅನುಭವಿಸಿವೆ. ನೂತನ ಕೃಷಿ ಕಾನೂನುಗಳನ್ನುಖಂಡಿಸಿ ಕಳೆದ ವರ್ಷ ಅಕಾಲಿದಳ ಪಕ್ಷವು ಎನ್‌ಡಿಎದಿಂದ ಹೊರಬಂದಿದ್ದರಿಂದ ಬಿಜೆಪಿ ಹಾಗೂ ಶಿರೋಮಣಿ ಅಕಾಲಿದಳ ಪಕ್ಷಗಳು ಪ್ರತ್ಯೇಕವಾಗಿ ಚುನಾವಣೆಯಲ್ಲಿ ಸೆಣೆಸಿವೆ. ಪಂಜಾಬ್‌ ರೈತರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಖಂಡಿಸಿ ಧರಣಿ ನಡೆಸುತ್ತಿರುವುದು ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಿರುವ ಸಾಧ್ಯತೆಯಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಇತ್ತೀಚಿನ ರಾಜಕೀಯ ಬೆಳವಣಿಗೆ ಬಗ್ಗೆ ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಜೊತೆ ಮಾತನಾಡಿದ ಏಕನಾಥ್ ಶಿಂಧೆ
advertisement

ನಿಮ್ಮ ಕಾಮೆಂಟ್ ಬರೆಯಿರಿ