ಪುದುಚೆರಿಯಲ್ಲಿ ಆಪರೇಶನ್‌ ಕಮಲ: ಸಿಎಂ ನಾರಾಯಣಸ್ವಾಮಿ ಆರೋಪ

ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ಕಾಂಗ್ರೆಸ್‌-ಡಿಎಂಕೆ ಸಮ್ಮಿಶ್ರ ಸರಕಾರ ಅಲ್ಪಮತಕ್ಕೆ ಕುಸಿದಿರುವುದರಿಂದ ಬಿಜೆಪಿ ಆಪರೇಶನ್‌ ಕಮಲ ಮಾಡುತ್ತಿದೆ ಎಂದು ಮುಖ್ಯಮಂತ್ರಿ ನಾರಾಯಣಸ್ವಾಮಿ ಆರೋಪ ಮಾಡಿದ್ದಾರೆ.
ನಾರಾಯಣಸ್ವಾಮಿ ಅವರ ಆಪ್ತ ಎ. ಜಾನ್‌ಕುಮಾರ ರಾಜೀನಾಮೆಯೊಂದಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಸದಸ್ಯರ ಸಂಖ್ಯೆ ೧೦ಕ್ಕೆ ಕುಸಿದಿದೆ. ಈವರೆಗೆ ಕಾಂಗ್ರೆಸ್‌ನ ನಾಲ್ವರು ಶಾಸಕರು ರಾಜೀನಾಮೆ ನೀಡಿದ್ದಾರೆ. ಅವರಲ್ಲಿ ಇಬ್ಬರು ಬಿಜೆಪಿ ಸೇರಿದ್ದಾರೆ. ಸೋಮವಾರ ರಾಜಿನಾಮೆ ನೀಡಿದ ಮಲ್ಲಾಡಿ ಕೃಷ್ಣರಾವ್‌ ಹಾಗೂ ಎ.ಜಾನ್‌ಕುಮಾರ ಬಿಜೆಪಿಗೆ ಸೇರುವ ಸಾಧ್ಯತೆಯಿದೆ. ಫೆ.೧೭ರಿಂದ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಪುದುಚೆರಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.
ಕಾಂಗ್ರೆಸ್‌ ಹಾಗೂ ಡಿಎಂಕೆ ಶಾಸಕರಿಗೆ ಹಣದ ಆಮಿಷವೊಡ್ಡಿ ಬಿಜೆಪಿ ಆಪರೇಶನ್‌ ಕಮಲ ಮಾಡಲು ಯತ್ನಿಸುತ್ತಿದೆ. ಆದರೆ ಏಪ್ರಿಲ್‌-ಮೇ ತಿಂಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement