ಪಂಜಾಬ್‌ ಸ್ಥಳಿಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ಗೆ ಭಾರಿ ಗೆಲುವು

ಪಂಜಾಬ್‌ನಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಚುನಾವಣೆ ನಡೆದ ೮ ಪುರಸಭೆಗಳಲ್ಲಿ ೭ರಲ್ಲಿ ಜಯಭೇರಿ ಬಾರಿಸಿದೆ.
ಮೊಗಾ, ಹೋಶಿಯಾರ್‌ಪುರ್, ಕಪುರ್ಥಲಾ, ಅಬೋಹರ್, ಪಠಾಣ್‌ಕೋಟ್, ಬಟಾಲಾ, ಮತ್ತು ಬಟಿಂಡಾ ಎಂಬ ಏಳು ನಿಗಮಗಳ ಫಲಿತಾಂಶಗಳನ್ನು ಬುಧವಾರ ಘೋಷಿಸಲಾಗಿದ್ದು, ಕಾಂಗ್ರೆಸ್ ಸ್ಪಷ್ಟವಾಗಿ ಬಹುಮತ ಪಡೆದುಕೊಂಡಿದೆ. ಬಿಜೆಪಿ, ಶಿರೋಮಣಿ ಅಕಾಲಿದಳ ಹಾಗೂ ಆಮ್‌ ಆದ್ಮಿ ಪಕ್ಷಗಳು ಮುಖಭಂಗ ಅನುಭವಿಸಿವೆ. ನೂತನ ಕೃಷಿ ಕಾನೂನುಗಳನ್ನುಖಂಡಿಸಿ ಕಳೆದ ವರ್ಷ ಅಕಾಲಿದಳ ಪಕ್ಷವು ಎನ್‌ಡಿಎದಿಂದ ಹೊರಬಂದಿದ್ದರಿಂದ ಬಿಜೆಪಿ ಹಾಗೂ ಶಿರೋಮಣಿ ಅಕಾಲಿದಳ ಪಕ್ಷಗಳು ಪ್ರತ್ಯೇಕವಾಗಿ ಚುನಾವಣೆಯಲ್ಲಿ ಸೆಣೆಸಿವೆ. ಪಂಜಾಬ್‌ ರೈತರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಖಂಡಿಸಿ ಧರಣಿ ನಡೆಸುತ್ತಿರುವುದು ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಿರುವ ಸಾಧ್ಯತೆಯಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಶಿರಸಿ: ಕಸ್ತೂರಿರಂಗನ್ ವರದಿಯಿಂದ ಉತ್ತರ ಕನ್ನಡ ಜಿಲ್ಲೆಯ 567 ಹಳ್ಳಿಗಳನ್ನು ಕೈಬಿಡಲು ಒತ್ತಾಯಿಸಿ ಸಹಸ್ರಾರು ಆಕ್ಷೇಪಣಾ ಪತ್ರ ಸಲ್ಲಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement