ಈಗ ಮೀಸಲಾತಿ ಹೋರಾಟಕ್ಕೆ ಸಜ್ಜಾದ ಒಕ್ಕಲಿಗರು

ಬೆಂಗಳೂರು: ಕುರುಬ, ಪಂಚಮಸಾಲಿ, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಒಕ್ಕಲಿಗ ಸಮುದಾಯ ಕೂಡ ಮೀಸಲಾತಿ ಹೋರಾಟಕ್ಕೆ ಸನ್ನದ್ಧಗೊಂಡಿದೆ.
ಒಕ್ಕಲಿಗ ಸಮುದಾಯ ಎಲ್ಲಾ 115 ಉಪ ಪಂಗಡಗಳನ್ನು ರಾಷ್ಟ್ರೀಯ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು ಎಂದು ಸಮುದಾಯದ ಮುಖಂಡರು ಬೇಡಿಕೆ ಇಟ್ಟಿದ್ದಾರೆ.
ಒಂದು ವೇಳೆ ಬೇಡಿಕೆ ಈಡೇರದೇ ಇದ್ದರೆ ಆದಿ ಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಸಮುದಾಯದ ನಾಯಕರು ನಿರ್ಧರಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ ಮಠಾಧೀಶರು ಹಾಗೂ ಮುಖಂಡರು ಸಭೆ ನಡೆಸಿದ್ದು, ಸರಕಾರದ ಮುಂದೆ ಈ ಬೇಡಿಕೆ ಇಡಲು ನಿರ್ಧರಿಸಲಾಗಿದೆ.
ನಿರ್ಮಲಾನಂದ ಸ್ವಾಮೀಜಿ ಮಾತನಾಡಿ, ಒಕ್ಕಲಿಗ ಸಮುದಾಯದ ಹಿತರಕ್ಷಣೆಗೆ ಈಗಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕಾಗಿದೆ. ಅಲ್ಲದೇ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರದ ರಚನೆಯೂ ಆಗಬೇಕಿದೆ.
ಅಲ್ಲದೇ ಮೀಸಲಾತಿ ನೀಡುವ ಸಂಬಂಧ ನಾವು ಸರ್ಕಾರವನ್ನು ಒತ್ತಾಯಿಸಬೇಕಾಗಿದೆ. ಸರ್ಕಾದರ ಮೇಲೆ ಒತ್ತಡ ಹೇರಲು ಹೋರಾಟ ರೂಪಿಸಬೇಕಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್​ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement