ಫೆ.೨೬ರಂದು ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶಾಸಕ ಶರತ್‌ ಕಾಂಗ್ರೆಸ್‌ ಸೇರ್ಪಡೆ

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಫೆ.೨೬ರಂದು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ.
ಕ್ವೀನ್ದ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ನ ಮುಖಂಡರಾದ ಡಿ.ಕೆ.ಶಿವಕುಮಾರ ಹಾಗೂ ಸಿದ್ದರಾಮಯ್ಯ ಸಮ್ಮುಖದಲ್ಲಿ ಅವರು ಕೈ ಪಾಳೆಯಕ್ಕೆ ಸೇರಲಿದ್ದಾರೆ. ರಾಜ್ಯ ಕಾಂಗ್ರೆಸ್‌ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ಬಳಿಕೆ ಶರತ್‌ ಕಾಂಗ್ರೆಸ್‌ ಸೇರ್ಪಡೆಗೊಳ್ಳಲುಮ ನಿರ್ಧರಿಸಿದ್ದಾರೆ. ೨೦೧೮ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಎಂ.ಟಿ.ಬಿ.ನಾಗರಾಜ ವಿರುದ್ಧ ಸೋಲು ಕಂಡಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಎಂ.ಟಿ.ಬಿ. ನಾಗರಾಜ ಕಾಂಗ್ರೆಸ್‌ಗೆ ರಾಜಿನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡರು. ಉಪಚುನಾವಣೆಯಲ್ಲಿ ಎಂ.ಟಿ.ಬಿ. ನಾಗರಾಜ್‌ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಾಗ ಬಿಜೆಪಿ ಟಿಕೇಟ್‌ ಸಿಗದಿದ್ದರಿಂದ ಶರತ್‌ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಕಂಡಿದ್ದರು. ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ನಂತರ ಹೊಸಕೋಟೆಯಲ್ಲಿ ಬೃಹತ್‌ ಕಾಂಗ್ರೆಸ್‌ ಸಮಾವೇಶ ಆಯೋಜಿಸಲು ಶರತ್‌ ನಿರ್ಧರಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement