ಮುಂಬೈ: ಕೇಂದ್ರ ಸರಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವುದರ ಕುರಿತು ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯಕುಮಾರ ಮೌನ ವಹಿಸಿರುವುದನ್ನು ಖಂಡಿಸಿದ ಮಹಾರಾಷ್ಟ್ರ ಕಾಂಗ್ರೆಸ್ ಇಬ್ಬರೂ ನಟರ ಚಿತ್ರಗಳ ಚಿತ್ರೀಕರಣ ಮಾಡಲು ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಇಬ್ಬರೂ ಹಿರಿಯ ನಟರ ನಿಲುವು ಖಂಡಿಸಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳದಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಆದರೂ ಅಕ್ಷಯಕುಮಾರ ಹಾಗೂ ಅಮಿತಾಭ್ ಬಚ್ಚನ್ ಇದರ ಕುರಿತು ತುಟಿ ಬಿಚ್ಚದಿರುವುದು ಖಂಡನೀಯ. ಇಬ್ಬರೂ ನಟಿಸುವ ಚಿತ್ರಗಳ ಚಿತ್ರೀಕರಣಕ್ಕೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಮೊದಲೇ ಕೊರೊನಾದಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕುಸಿದಿದ್ದರೂ ಕೇಂದ್ರ ಸರಕಾರ ದರ ಹೆಚ್ಚಿಸುವ ಮೂಲಕ ಜನರ ಮೇಲೆ ಇನ್ನಷ್ಟು ಹೊರೆ ಹೇರುತ್ತಿದೆ. ಒಂದು ವೇಳೆ ಕೇಂದ್ರ ಸರಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |

ನಿಮ್ಮ ಕಾಮೆಂಟ್ ಬರೆಯಿರಿ