ನಿವೃತ್ತ ಸಿಜೆಐ ರಂಜನ್‌ ಗೊಗೊಯ್‌ ವಿರುದ್ಧದ ಸ್ವಯಂ ಪ್ರೇರಿತ ಪ್ರಕರಣ ರದ್ದುಗೊಳಿಸಿದ ಸುಪ್ರಿಂ ಕೋರ್ಟ್‌

ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಅವರನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಲುಕಿಸುವ ಸಂಚಿನ ಕುರಿತು ತಾನು ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಪಡಿಸಿದೆ.
ನ್ಯಾಯಮೂರ್ತಿ ಸಂಜಯ್‌ಕಿಶನ್‌ ಕೌಲ್‌ ನೇತೃತ್ವದ ಪೀಠ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಎ.ಎಸ್‌.ಬೋಪಣ್ಣ, ವಿ.ರಾಮಸುಬ್ರಮಣಿಯನ್‌ ಅವರನ್ನೊಳಗೊಂಡ ನ್ಯಾಯಪೀಠ ಪಿತೂರಿಯ ಬಗ್ಗೆ ತನಿಖೆ ನಡೆಸಲು ನೇಮಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್‌ ಸಮಿತಿಗೆ ವ್ಯಾಟ್ಸಪ್‌ ಸಂದೇಶಗಳಂಥ ಎಲೆಕ್ಟ್ರಾನಿಕ್‌ ದಾಖಲೆಗಳನ್ನು ಪಡೆಯಲು ಸಾಧ್ಯವಾಗಿಲ್ಲ. ಇದರಿಂದಾಗಿ ಸ್ವಯಂ ಪ್ರೇರಿತ ಪ್ರಕರಣವನ್ನು ಮುಂದುವರೆಸುವುದರಿಂದ ಉದ್ದೇಶ ಈಡೇರುವುದಿಲ್ಲ ಎಂದು ತಿಳಿಸಿದೆ.
ಗೊಗೊಯ್‌ ಅವರು ಆಸ್ಸಾಂ ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಗೆ ಸಂಬಂಧಿಸಿದ ತೀರ್ಪುಗಳಂಥ ಕಠಿಣ ನಿರ್ಧಾರಗಳಿಂದಾಗಿ ಕೆಲ ಪಿತೂರಿಗಳು ನಡೆದಿರುವ ಸಾಧ್ಯತೆಯಿದೆ ಎಂಬ ಗುಪ್ತಚರ ದಳ ನಿರ್ದೇಶಕರ ಪತ್ರವನ್ನು ಸುಪ್ರಿಂ ಕೋರ್ಟ್‌ ಉಲ್ಲೇಖಿಸಿದೆ. ರಂಜನ್ ಗೊಗೊಯ್‌ ಅವರ ವಿರುದ್ಧ ಕೆಲ ಪಿತೂರಿಗಳು ನಡೆದಿರಬಹುದು ಎಂದು ಎಂಬುದನ್ನು ನಂಬಲು ಬಲವಾದ ಕಾರಣಗಳಿವೆ ಎಂದು ಹೇಳಿರುವ ಪಟ್ನಾಯಕ್‌ ಅವರ ವರದಿಯನ್ನು ನ್ಯಾಯಾಲಯ ಉಲ್ಲೇಖಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement