ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಮಧ್ಯ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಕರ್ನಾಟಕ, ಕೇರಳ, ವಿದರ್ಭ, ಛತ್ತೀಸಗಡ, ಮಧ್ಯ ಮಹಾರಾಷ್ಟ್ರ, ತಮಿಳುನಾಡು, ಪುದುಚೇರಿ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಕಾರಣದಿಂದಾಗಿ, ಮಧ್ಯ ಹಾಗೂ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.
ಕೇರಳದಿಂದ ಮಹಾರಾಷ್ಟ್ರದವರೆಗೂ ವಾಯುಭಾರ ಕುಸಿತಗೊಂಡಿರುವ ಕಾರಣ, ಕರ್ನಾಟಕದಲ್ಲಿಯೂ ಮೋಡಕವಿದ ವಾತಾವರಣವಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಶಿರಸಿ, ಹಳಿಯಾಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ