ಬೆಂಗಳೂರು: ನಿಮ್ಮ ಪಕ್ಷದೊಳಗಿನ ಆಂತರಿಕ ಹೋರಾಟವನ್ನು ಮೊದಲು ಬಗೆಹರಿಸಿಕೊಳ್ಳಿ ಎಂದು ಬಿಜೆಪಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದೆ.
ಕಾಂಗ್ರೆಸ್‌ನಲ್ಲಿ ಅಹಿಂದ ವಿಚಾರವಾಗಿ ಪರ ಹಾಗೂ ವಿರೋಧ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಟ್ವೀಟ್ ಮೂಲಕ ಟಾಂಗ್ ನೀಡಿದೆ.
ಅಹಿಂದ ಎಂದು ಹೊರಟಿದ್ದ ಸಿದ್ದರಾಮಯ್ಯ ದಿಢೀರನೆ ಅಲ್ಪಸಂಖ್ಯಾತರನ್ನು ಕೈಬಿಟ್ಟು ಹಿಂದ ಎನ್ನುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಾಭವಗೊಂಡಾಗಲೇ ಜಾತಿ, ಧರ್ಮ ಆಧಾರಿತವಾಗಿ ರಾಜಕಾರಣ ಮಾಡುವುದನ್ನು ಬಿಡಬೇಕಿತ್ತು ಎಂದು ತಿಳಿಸಿದೆ.
ಮೀಸಲಾತಿ ಹೋರಾಟಕ್ಕೆ ಪ್ರತಿಯಾಗಿ ಅಹಿಂದ ಸಂಘಟನೆ ಮಾಡಲು ಸಿದ್ದರಾಮಯ್ಯ ಮುಂದಾಗಿದ್ದರು. ಕಾಂಗ್ರೆಸ್ ಹೈಕಮಾಂಡ್ ಇದಕ್ಕೆ ಅನುಮತಿ ನೀಡಿಲ್ಲ. ಅಹಿಂದ ಸಮಾವೇಶಕ್ಕೆ ಡಿ.ಕೆ.ಶಿವಕುಮಾರ ಸೇರಿದಂತೆ ರಾಜ್ಯ ಕಾಂಗ್ರೆಸ್ ಮುಖಂಡರಲ್ಲಿಯೇ ವಿರೋಧವಿದೆ. ಅಹಿಂದ ಕುರಿತು ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ ಅವರ ಕಾಲೆಳೆದಿದೆ. ನಿಮ್ಮ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಮೊದಲು ಬಗೆಹರಿಸಿಕೊಳ್ಳುವಂತೆ ಸಲಹೆಯನ್ನು ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ