ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಕೊವಿಡ್‌ ನಿಯಮ ಪಾಲಿಸಿ, ಮಧ್ಯಾಹ್ನದ ಊಟ ತನ್ನಿ

ಬೆಂಗಳೂರು: ಇದೇ ತಿಂಗಳು 22ರಿಂದ 6 ರಿಂದ 8ನೇ ತರಗತಿಗಳ ಆರಂಭವಾಗುತ್ತಿರುವುದರಿಂದ ಮಕ್ಕಳ ಸಂಖ್ಯೆ ಶಾಲೆಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ.

6ರಿಂದ 8ನೇ ತರಗತಿಗಳ ಆರಂಭಕ್ಕೆ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಶುಕ್ರವಾರ ಸುತ್ತೋಲೆ ಹೊರಡಿಸಿದ್ದು, ಸುತ್ತೋಲೆಯಲ್ಲಿ ವಿವರಿಸಿರುವ ಅಂಶಗಳು ಹಾಗೂ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅವರು ಪ್ರಕಟಣೆಯಲ್ಲ ಹೇಳಿದ್ದಾರೆ.

ರಾಜ್ಯದೆಲ್ಲೆಡೆ 6ರಿಂದ 12ನೇ ತರಗತಿಗಳು ಪೂರ್ಣಾವಧಿಯಲ್ಲಿ ನಡೆಯಲಿವೆ. ಬಿಬಿಎಂಪಿ ಮತ್ತು ಕೇರಳ ಗಡಿಯ ಶಾಲೆಗಳಲ್ಲಿ 6 ಮತು 7ನೇ ತರಗತಿಗಳಿಗೆ ಎಂದಿನಂತೆ ಪರಿಷ್ಕೃತ ವಿದ್ಯಾಗಮ ತರಗತಿಗಳು ನಡೆಯಲಿವೆ.

6ರಿಂದ ಮೇಲಿನ ತರಗತಿಗಳ ವಿದ್ಯಾರ್ಥಿಗಳು ಮನೆಯಿಂದ ಮಧ್ಯಾಹ್ನದ ಊಟ ತರಬಹುದಾಗಿದೆ. ಸಾಮಾಜಿಕ ಅಂತರ ಮತ್ತು ಶುಚಿತ್ವ ಕಾಪಾಡುವುದು ಮತ್ತು ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುತ್ತೋಲೆಯಲ್ಲಿ ವಾರದ ಐದು ದಿನಗಳು 6ರಿಂದ ಮೇಲಿನ ತರಗತಿಗಳು ಬೆಳಗ್ಗೆ 10ರಿಂದ 4.30ರವರೆಗೆ ಮತ್ತು ಶನಿವಾರ ಬೆಳಗ್ಗೆ 10.30ರಿಂದ 12.30ರವರೆಗೆ ನಡೆಯಲಿವೆ ಎಂದು ಸಲಹಾತ್ಮಕ ವೇಳಾಪಟ್ಟಿ ನಿಗದಿಪಡಿಲಾಗಿದೆ. ಬಿಬಿಎಂಪಿ ಮತ್ತು ಕೇರಳ ಗಡಿ ಭಾಗದ ಶಾಲೆಗಳಲ್ಲಿ 6 ಮತ್ತು 7ನೇ ತರಗತಿಗಳ ವಿದ್ಯಾಗಮ ಕಾರ್ಯಕ್ರಮಗಳು ವಾರದಲ್ಲಿ ಪ್ರತ್ಯೇಕ ಮೂರು ದಿನಗಳ ಕಾಲ ನಡೆಯಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದಿದ್ದ ತಾಯಿ ಜೈಲಿನಲ್ಲಿ ಆತ್ಮಹತ್ಯೆ

ರಾಜ್ಯದ ಎಲ್ಲ ಜಿಲ್ಲೆಗಳ ಆಯ್ದ ಶಾಲೆಗಳು ಮತ್ತು ವಿದ್ಯಾರ್ಥಿನಿಲಯಗಳಲ್ಲಿ ಆರೋಗ್ಯ ಇಲಾಖೆ ವಿದ್ಯಾರ್ಥಿಗಳ ರ‍್ಯಾಂಡಮ್ ಪರೀಕ್ಷೆ ನಡೆಸಲಿದೆ. ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಶಾಲೆಗೆ ಬರಲು ಅನುಮತಿ ಪತ್ರ ತರಬೇಕಿದ್ದು, ಪೋಷಕರು ತಮ್ಮ ಪುತ್ರ/ಪುತ್ರಿ ಕೋವಿಡ್ ಲಕ್ಷಣಗಳಿಂದ ಮುಕ್ತವಾಗಿದ್ದಾರೆಂದು ಎಂದು ಅದರಲ್ಲಿ ತಿಳಿಸುವುದು ಕಡ್ಡಾಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಪೂರ್ಣಪ್ರಮಾಣದಲ್ಲಿ ವಿದ್ಯಾರ್ಥಿಗಳು ದಾಖಲಾಗದ ಹಿನ್ನೆಲೆಯಲ್ಲಿ ದಾಖಲಾತಿ ಅವಧಿಯನ್ನು ಮಾರ್ಚ್ 30ರವರೆಗೆ ವಿಸ್ತರಿಸಲಾಗಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಚಿವರು ಮನವಿ ಮಾಡಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement