ಬೀಜಿಂಗ್: ಕಳೆದ ವರ್ಷ ಪೂರ್ವ ಲದಾಕ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಸೇನೆಯೊಂದಿಗೆ ನಡೆದ ಘರ್ಷಣೆಯಲ್ಲಿ ಐವರು ಚೀನಾದ ಮಿಲಿಟರಿ ಅಧಿಕಾರಿಗಳು ಮತ್ತು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಶುಕ್ರವಾರ ಮೊದಲ ಬಾರಿಗೆ ಒಪ್ಪಿಕೊಂಡಿದೆ.
2020 ರ ಜೂನ್‌ನಲ್ಲಿ ಗಾಲ್ವಾನ್ ಕಣಿವೆಯಲ್ಲಿ ಸಂಭವಿಸಿದ ಘರ್ಷಣೆಯಲ್ಲಿ ತಮ್ಮ ದೇಶದ ಮಿಲಿಟರಿ ಅಧಿಕಾರಿಗಳು ಹಾಗೂ ಸೈನಿಕರು ಸಾವನ್ನಪ್ಪಿದ್ದಾರೆ ಎಂಬುದನ್ನು ಪಿಎಲ್‌ಎ ಒಪ್ಪಿಕೊಂಡಿದ್ದನ್ನು ಮಿಲಿಟರಿಯ ಪತ್ರಿಕೆ ಶುಕ್ರವಾರ ವರದಿ ಮಾಡಿದೆ. ಆದರೂ ಅವರ ಹೇಳಿಕೆಯಲ್ಲಿ ಎಷ್ಟು ನಿಜಾಂಶವಿದೆ ಎಂಬುದರ ಬಗ್ಗೆ ಸಂದೇಹವಿದೆ.
ಕೊಲ್ಲಲ್ಪಟ್ಟವರಲ್ಲಿ ಪಿಎಲ್‌ಎ ಕ್ಸಿನ್‌ಜಿಯಾಂಗ್ ಮಿಲಿಟರಿ ಕಮಾಂಡ್‌ನ ರೆಜಿಮೆಂಟಲ್ ಕಮಾಂಡರ್ ಕೀ ಫಬಾವೊ ಸೇರಿದ್ದಾರೆ. ಜೂನ್ 15 ರಂದು ನಡೆದ ಗಾಲ್ವಾನ್ ವ್ಯಾಲಿ ಘರ್ಷಣೆಯಲ್ಲಿ ಒಟ್ಟು 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು. ರೆಜಿಮೆಂಟಲ್ ಕಮಾಂಡರ್ ಕಿ ಫಬಾವೊ ಅವರಿಗೆ “ಗಡಿ ರಕ್ಷಣಾ ಹೀರೋ ರೆಜಿಮೆಂಟಲ್ ಕಮಾಂಡರ್” ಎಂಬ ಗೌರವ ನೀಡಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ