ಬೆಂಗಳೂರು: ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತೆ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವ ವಿಷಯದಲ್ಲಿ ತಾವು ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲದೆ, ಪಂಚಮಸಾಲಿ ಸಮುದಾಯ 2ಎ ಗೆ ಸೇರಬೇಕು ಎನ್ನುವ ನಿಲುವು ನನ್ನದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟ ಸಭೆಯಲ್ಲಿ ನಡೆದಿದೆ ಎನ್ನಲಾದ ಮಾತಿನ ಚಕಮಕಿ ಸತ್ಯಕ್ಕೆ ದೂರವಾದುದು. ಮೊದಲಿನಿಂದಲೂ ಪಂಚಮಸಾಲಿ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ದೊರಕಬೇಕು ಎಂದು ಪ್ರತಿಪಾದನೆ ಮಾಡಿಕೊಂಡು ಬಂದಿದ್ದೇವೆ. ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಮೂಲಕ ಸಮುದಾಯದಲ್ಲಿ ನನ್ನ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಹೇಳಿದರು.

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳು ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಹೋರಾಟಕ್ಕೆ ಈಗಾಗಲೇ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕಾನೂನಾತ್ಮಕವಾಗಿ ನಡೆಯಬೇಕಾದ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಹೋರಾಟಕ್ಕೆ ಬೇಕಾದ ಬೆಂಬಲವನ್ನು ನಾವು ನೀಡಲು ಸಿದ್ದರಿದ್ದೇವೆ ಎಂದು ತಿಳಿಸಿದರು.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ