ಪಿಎಫ್‌ಐ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬೊಮ್ಮಾಯಿ ಸೂಚನೆ

ಬೆಂಗಳೂರು : ದೇಶ ವಿರೋಧಿ ಮತ್ತು ಅಸಂವಿಧಾನಿಕ ಹೇಳಿಕೆ ನೀಡಿರುವ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ , ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳ್ಳಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಎಫ್‌ಐ ನಾಯಕರು ದೇಶ ವಿರೋಧಿ ಹೇಳಿಕೆ ನೀಡಿದ್ದಾರೆ. ಅದನ್ನುನಾವು ಎಂದಿಗೂ ಸಹಿಸಲು ಸಾಧ್ಯವಿಲ್ಲ ಎಂದರು.
ಈ ಹೇಳಿಕೆಯೊಂದಿಗೆಪಿಎಫ್‌ಐ ತನ್ನ ನೈಜ ಬಣ್ಣವನ್ನು ಜಗತ್ತಿಗೆ ತೋರಿಸಿದೆ ಎಂದು ಬೊಮ್ಮಾಯಿ ಹೇಳಿದರು.
ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ಆರ್ ಎಸ್ ಎಸ್ ಸಂಘಟನೆ ದೇಶಭಕ್ತಿಯ ಪ್ರತೀಕ. ಇದರ ವಿರುದ್ಧ ಪಿಎಫ್‌ಐ ಮುಖಂಡರು ಟೀಕೆ ಮಾಡಿರುವುದು ಖಂಡನಾರ್ಹ. ಇದು ದೇಶದ ಜನತೆಯನ್ನು ಒಡೆಯಲು ಮಾಡಿರುವ ಹುನ್ನಾರ. ಈ ರಾಷ್ಟ್ರ ವಿರೋಧಿ ಹೇಳಿಕೆ ನೀಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಪ್ರಮುಖ ಸುದ್ದಿ :-   ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಜುಲೈ 18ರ ವರೆಗೆ ಇಡಿ ಕಸ್ಟಡಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement