ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಕೊರೊನಾ ಅಲೆ ಆರಂಭವಾಗುವ ಸಾಧ್ಯತೆ ಇದೆ ಹೀಗಾಗಿ ಕೇರಳ, ಮಹಾರಾಷ್ಟ್ರದ ಗಡಿ ಜಿಲ್ಲೆ ಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟೆಚ್ಚರ ವಹಿಸುವಂತೆ ಪತ್ರ ಬರೆಯಲಾಗಿದೆ. ನಾಳೆ ಗಡಿ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸರ್ಕಾರ ವಿಡಿಯೋ ಸಂವಾದ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ವಿವಿಧ ಅಭಿವೃದ್ದಿ ಯೋಜನೆಗೆ ಚಾಲನೆ ಮಾಡಿ ಮಾತಾನಾಡಿದ ಅವರು ಈಗಾಗಲೇ ಈ ಬಗ್ಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ನೆಗಟಿವ್ ವರದಿ ಕಡ್ಡಾಯ. ಇಲ್ಲವಾದಲ್ಲಿ ಇಲ್ಲಿ ಟೆಸ್ಟ್ ಮಾಡಿಸಲೇ ಬೇಕು ಎಂದು ಅವರು ತಿಳಿಸಿದರು.
ಕೊರೊನಾ ಹೋಗಿದೆ ಎಂದು ಜನರು ಮೈಮರೆತು ಸಮಸ್ಯೆಯನ್ನು ಮೈ ಮೇಲೆ ಎಳೆದುಕೊಳ್ಳಬಾರದು. ಈ ಬಗ್ಗೆ ಎಚ್ಚರವಾಗಿರಬೇಕು.ಕೊರೊನಾ ಇನ್ನೂ ಹೋಗಿಲ್ಲ,, ನಮ್ಮ ಮಧ್ಯೆಯಿದೆ ಎಂದು ತಿಳಿಸಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ