ಸರ್ವರಿಗೂ ಕ್ರೋಧಿ ಸಂವತ್ಸರದ ಯುಗಾದಿಯ ಹಾರ್ದಿಕ ಶುಭಾಶಯಗಳು

ಶ್ರೀನಗರ ಉಗ್ರರ ದಾಳಿ: ಇಬ್ಬರು ಪೊಲೀಸರು ಹತ

ಶ್ರೀನಗರದ ಹೆಚ್ಚಿನ ಭದ್ರತೆಯ ವಿಮಾನ ನಿಲ್ದಾಣ ರಸ್ತೆಯ ಬಾಗಟ್‌ ಪ್ರದೇಶದಲ್ಲಿ ಉಗ್ರರು ಇಬ್ಬರು ಪೊಲೀಸರನ್ನು ಹತ್ಯೆ ಮಾಡಿದ್ದಾರೆ.
ಉಗ್ರರು ಸಮೀಪದಿಂದ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮರಣ ಹೊಂದಿದ್ದರು. ಹತ್ಯೆಗೀಡಾದ ಪೊಲೀಸರನ್ನು ಕಾನ್‌ಸ್ಟೆಬಲ್‌ಗಳಾದ ಸೊಹೈಲ್ ಮತ್ತು ಮೊಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ. ದಾಳಿ ನಡೆದಾಗ ಅವರು ನಗರದ ಬಾಗಾಟ್ ಪ್ರದೇಶದ ಚಹಾ ಅಂಗಡಿಯಲ್ಲಿದ್ದರು.
ಹಲ್ಲೆಕೋರರನ್ನು ಪತ್ತೆ ಹಚ್ಚಲು ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ನಗರದಲ್ಲಿ ನಡೆದ ಎರಡನೇ ದಾಳಿ ಇದಾಗಿದ್ದು, ನಗರದ ದುರ್ಗಾನಾಗ್ ಪ್ರದೇಶದಲ್ಲಿ ಉಗ್ರ ಗುಂಡಿನ ದಾಳಿಯಿಂದ ರೆಸ್ಟೋರೆಂಟ್ ಮಾಲೀಕರ ಮಗ ಗಂಭೀರವಾಗಿ ಗಾಯಗೊಂಡಿದ್ದಾನೆ.
ಕೇಂದ್ರ ಭೂಪ್ರದೇಶದಲ್ಲಿನ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ವಿವಿಧ ದೇಶಗಳ 24 ಸದಸ್ಯರ ನಿಯೋಗ ಬುಧವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರ ಹಿನ್ನೆಲೆಯಲ್ಲಿ ನಗರದಲ್ಲಿ ದಾಳಿಗಳು ನಡೆದಿವೆ ಎಂದು ಅಂದಾಜಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement