ಅಯೋಧ್ಯಾ ಶ್ರೀರಾಮ ಮಂದಿರ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾರು?: ಸಚಿವ ಈಶ್ವರಪ್ಪ

ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ಶ್ರೀರಾಮ ಮಂದಿರದ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾರು ಎಂದು ಪ್ರಶ್ನಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ಬೇಕಾದರೆ ಕೂಲಿ ಮಾಡುವ ವ್ಯಕ್ತಿ ಲೆಕ್ಕ ಕೇಳಲಿ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಗೌರವವಿಲ್ಲದೇ ರಾಮಮಂದಿರ ನಿರ್ಮಾಣದ ಸ್ಥಳವನ್ನು ವಿವಾದಿತ ಸ್ಥಳ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಪ್ರಧಾನಿ ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ. ಕೂಲಿ ಮಾಡುವ ಒಬ್ಬ ವ್ಯಕ್ತಿ ಸಹ ರಾಮಮಂದಿರಕ್ಕೆ 10 ರೂಪಾಯಿ ದೇಣಿಗೆ ನೀಡಿದ್ದಾರೆ. ಅವರು ಲೆಕ್ಕ ಕೇಳಲಿ. ಇವನ್ಯಾರು ಲೆಕ್ಕ ಕೇಳಲು ಎಂದು ಆಕ್ರೋಷ ವ್ಯಕ್ತಪಡಿಸಿದರು.
ಮಂದಿರಕ್ಕೆ ಹಣ ನೀಡದವರ ಮನೆ ಮನೆಗೆ ಮಾರ್ಕ್‌ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಕುರಿತು, ಯಾರ ಮನೆಗೆ ಮಾರ್ಕ್‌ ಮಾಡಲಾಗಿದೆ ಎಂದು ತೋರಿಸಲಿ. ರಾಮನ ಬಗ್ಗೆ ಹಗುರವಾಗಿ ಮಾತನಾಡುವ ಪ್ರವೃತ್ತಿಯನ್ನು ಬಿಡಬೇಕು ಎಂದರು.
ಬಸನಗೌಡ ಪಾಟೀಲ ಯತ್ನಾಳ್‌ ಪಕ್ಷದ ಮುಖಂಡರ ಕುರಿತು ಆರೋಪ ಮಾಡಿರುವ ಬಗ್ಗೆ ಮಾತನಾಡಿ, ಈಗಾಗಲೇ ಯತ್ನಾಳ್‌ ಅವರಿಗೆ ಪಕ್ಷ ನೋಟಿಸ್ ನೀಡಿದೆ. ಅದಕ್ಕೆ ಉತ್ತರ ನೀಡಿದ ಮೇಲೆ ಕೇದ್ರದ ನಾಯಕರು ಅವರ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ. ಪಂಚಮಸಾಲಿಗೆ ಮೀಸಲಾತಿ ನೀಡುವ ಕುರಿತು ಕ್ಯಾಬಿನೆಟ್‌ನಲ್ಲಿ ಯಾರೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement