ಮೀಸಲಾತಿ : ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ

ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇಟ್ಟಿರುವ ಕುರಿತು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಸಚಿವರು ಸಮುದಾಯಗಳ ಬೇಡಿಕೆ ಕುರಿತಾಗಿ ಅಭಿಪ್ರಾಯಗಳನ್ನು ನನ್ನ ಬಳಿ ಹಂಚಿಕೊಂಡಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸರಿಯಾದ ನಿರ್ಣಯಗಳನ್ನು ಕೈಗೊಳ್ಳುವೆ ಎಂದರು.
ವಿವಿಧ ಸಮುದಾಯಗಳಿಗೆ ಮೀಸಲಾತಿ ನೀಡುವ ಸಂಬಂಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಕಾನೂನು ಹಾಗೂ ಸಂವಿಧಾನ ತಜ್ಞರ ಜೊತೆ ಚರ್ಚಿಸಲಾಗುವುದು ಎಂದರು.
ಬಜೆಟ್ ಪೂರ್ವಭಾವಿ ಸಭೆಯ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಬಹುತೇಕ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳಿಂದ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದಿದ್ದೇನೆ. ಗೃಹ ಖಾತೆ ಸೇರಿದಂತೆ ಒಂದೆರಡು ಇಲಾಖೆಗಳು ಮಾತ್ರ ಬಾಕಿ ಇವೆ. ಉಳಿದಿರುವ ಇಲಾಖೆಗಳ ಸಭೆ ಅರ್ಧ ದಿನದಲ್ಲಿ ಮುಗಿಯತ್ತದೆ. ಇದಾದ ನಂತರ ಬಜೆಟ್ ಪೂರ್ವ ಸಿದ್ದತೆಗಳು ಶುರುವಾಗಲಿದೆ ಎಂದು ವಿವರಿಸಿದರು.
ಈ ಬಾರಿಯ ಬಜೆಟ್‍ನಲ್ಲಿ ಇಲಾಖಾವಾರು ಏನೇನು ಕೊಡಬಹುದು, ಕಳೆದ ವರ್ಷ ಬಜೆಟ್‍ನಲ್ಲಿ ಎಷ್ಟು ಖರ್ಚಾಗಿದೆ, ಶೇಕಡವಾರು ಪ್ರಗತಿ ಎಲ್ಲದರ ಬಗ್ಗೆ ಸಮಗ್ರ ಮಾಹಿತಿ ಪಡೆದಿದ್ದೇನೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement