ಬೆಂಗಳೂರು: ಅಜೀಂ ಪ್ರೇಮ್ ಜಿ ಕಂಪೆನಿಗಳ ವಿರುದ್ಧ ತನಿಖೆ ಕೋರಿದ್ದ ರಿಟ್ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ, ಅಲ್ಲದೆ ಅರ್ಜಿದಾರರಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಇಂಡಿಯಾ ಅವೇಕ್ ಫಾರ್ ಟ್ರಾನ್ಸಪರೆನ್ಸಿ ಸಂಸ್ಥೆಯು ಅರ್ಜಿ ಸಲ್ಲಿಸಿ, ಅಜೀಂ ಪ್ರೇಮ್ಜಿ ಅವರ ಕಂಪನಿಗಳ ವಿರುದ್ಧ ಕಾರ್ಪೊರೇಟ್ ವ್ಯವಹಾರಗಳ ಇಲಾಖೆ ಮೂಲಕ ತನಿಖೆಗೆ ಕೋರಿತ್ತು. ಈ ಹಿಂದೆಯೂ ಇದೇ ಅರ್ಜಿದಾರರ ಮೂರು ರಿಟ್ ಅರ್ಜಿಗಳು ವಜಾಗೊಂಡಿದ್ದವು. ಒಂದೇ ವಿಚಾರಕ್ಕೆ ಪದೇಪದೆ ರಿಟ್ ಅರ್ಜಿ ಸಲ್ಲಿಸುತ್ತಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ