ಕರ್ನಾಟಕಕ್ಕೆ ಮಹಾರಾಷ್ಟ್ರದ ಆತಂಕ: ಆ ರಾಜ್ಯದ ಪ್ರಯಾಣಿಕರಿಗೆ ಪ್ರತ್ಯೇಕ ಕೊವಿಡ್‌ ಮಾರ್ಗಸೂಚಿ ಪ್ರಕಟ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಕೊರೊನಾ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ.
ಪ್ರಮುಖವಾಗಿ ಕೇರಳ, ಮಹಾರಾಷ್ಟ್ರದಲ್ಲಿ ಶೇ.75ರಷ್ಟು ಪ್ರಕರಣಗಳು ದಾಖಲಾಗುತ್ತಿದೆ. ಮಹಾರಾಷ್ಟ್ರ,ಕೇರಳದಲ್ಲಿ ಅಪಾಯಕಾರಿ ಬ್ರಿಟನ್ ವೈರಸ್ ಎಫ್484ಕೆ ವೇಗವಾಗಿ ವ್ಯಾಪಿಸುತ್ತಿದೆ. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮಹಾರಾಷ್ಟ್ರ ಮಾರ್ಗಸೂಚಿ ಪ್ರಕಟಿಸಿದೆ.
ಹೊಸ ಮಾರ್ಗಸೂಚಿಗಳು:
ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಯಂತೆ ಮಹಾರಾಷ್ಟ್ರದಿಂದ ಕರ್ನಾಟಕ ಪ್ರವೇಶಕ್ಕೆ ಕೋವಿಡ್ ನೆಗೆಟೀವ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ. ಕರ್ನಾಟಕಕ್ಕೆ ಬರುವ ಮಹಾರಾಷ್ಟ್ರದ ಪ್ರಯಾಣಿಕರ ಬಳಿ ಕೋವಿಡ್ ವರದಿ ಇದ್ದಲ್ಲಿ ಮಾತ್ರ ಬಸ್ ಟಿಕೆಟ್ ನೀಡಲಾಗುತ್ತದೆ.
ಒಂದು ವೇಳೆ ಆನ್‍ಲೈನ್‍ನಲ್ಲಿ ಟಿಕೆಟ್ ಬುಕ್ ಮಾಡಿದ್ದರೆ ಅವರ ಕೋವಿಡ್‌ ವರದಿ ನೋಡಿ ಬಸ್ಗೆ ಪ್ರವೇಶ ನೀಡಬೇಕು ಎಂದು ಸೂಚಿಸಲಾಗಿದೆ.
ರೈಲು ಪ್ರಯಾಣಿಕರ ಬಳಿ ನೆಗೆಟೀವ್ ವರದಿ ಇದ್ದಲ್ಲಿ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ವಿಮಾನ ಪ್ರಯಾಣಿಕರು ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ಬರುವುದನ್ನು ಕಡ್ಡಾಯ ಮಾಡಲಾಗಿದೆ. ಸ್ವಂತ ಅಥವಾ ಬಾಡಿಗೆ ವಾಹನಗಳಲ್ಲಿ ಬರುವವರಿಗೆ ಟೋಲ್‍ಗೇಟ್‍ಗಳಲ್ಲಿ ರ‍್ಯಾಂಡಮ್ ಚೆಕ್‍ಅಪ್ ಕಡ್ಡಾಯ ಮಾಡಲಾಗಿದೆ. ಮಹಾರಾಷ್ಟ್ರದಿಂದ ಬಂದವರಿಗೆ ಕೋವಿಡ್ ವರದಿ ಇದ್ದರಷ್ಟೇ, ಹೋಟೆಲ್, ಲಾಡ್ಜ್ ಗಳಲ್ಲಿ ರೂಂ ನೀಡಲಾಗುತ್ತದೆ.
2 ವಾರಗಳಲ್ಲಿ ಮಹಾರಾಷ್ಟ್ರದಿಂದ ಬಂದಿರುವ ವಿದ್ಯಾರ್ಥಿಗಳು, ಉದ್ಯಮಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದ್ದು,
ಹೋಟೆಲ್, ಶಿಕ್ಷಣ ಸಂಸ್ಥೆಗಳಲ್ಲಿ 5ಕ್ಕೂ ಹೆಚ್ಚು ಪ್ರಕರಣಗಖು ದಾಖಲಾದರೆ , ಕಂಟೈನ್ಮೆಂಟ್ ಝೋನ್ ಎಂದು ಪರಿಗಣನೆ ಮಾಡಲಾಗುತ್ತದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ ವಿತರಿಸಲು ಕ್ರಮ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement