ಕೇಂದ್ರ-ರಾಜ್ಯಗಳು ನಿಕಟವಾಗಿ ಕೆಲಸ ಮಾಡಲು ಕೆಲವು ಕಾನೂನುಗಳು ರದ್ದು:ಪ್ರಧಾನಿ ಇಂಗಿತ

ಮುಂಬೈ: ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಕೇಂದ್ರ ಮತ್ತು ರಾಜ್ಯಗಳು ನಿಕಟವಾಗಿ ಕೆಲಸ ಮಾಡಬೇಕಾಗಿದೆ. ಹೀಗಾಗಿ ಪುರಾತನ ಕಾನೂನುಗಳನ್ನು ರದ್ದುಪಡಿಸಿ ಕೇಂದ್ರ ಮತ್ತು ರಾಜ್ಯದ ವ್ಯವಹಾರವನ್ನು ಸುಲಭಗೊಳಿಸಲು ಬೇಕಾದುದನ್ನು ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಶನಿವಾರ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸರ್ಕಾರದ ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ಭಾಗವಾಗಲು ಖಾಸಗಿ ವಲಯಕ್ಕೆ ಸಂಪೂರ್ಣ ಅವಕಾಶ ನೀಡಬೇಕು ಎಂದು ಪ್ರತಿಪಾದಿಸಿದರು.
ರಾಷ್ಟ್ರದ ಪ್ರಗತಿಗೆ ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕು. ಆರ್ಥಿಕ ಪ್ರಗತಿಗೆ ಸರ್ಕಾರ ಖಾಸಗಿ ವಲಯಕ್ಕೆ ಸರಿಯಾದ ಪ್ರಾತಿನಿಧ್ಯವನ್ನು ನೀಡಬೇಕು. ಕೇಂದ್ರ ಬಜೆಟ್ 2021-22ರ ಸಕಾರಾತ್ಮಕ ಪ್ರತಿಕ್ರಿಯೆಯು ದೇಶವು ಹೆಚ್ಚಿನ ವೇಗದಲ್ಲಿ ಅಭಿವೃದ್ಧಿಯ ಹಾದಿಯಲ್ಲಿ ಮುಂದುವರಿಯಲು ಬಯಸುತ್ತದೆ ಎಂಬುದನ್ನು ಸೂಚಿಸುತ್ತದೆ ಎಂದು ಅವರು ಸರ್ಕಾರ ಕೈಗೊಂಡಿರುವ ಉಪಕ್ರಮಗಳು ರಾಷ್ಟ್ರ ನಿರ್ಮಾಣದಲ್ಲಿ ಭಾಗವಹಿಸಲು ಎಲ್ಲರಿಗೂ ತನ್ನ ಸಂಪೂರ್ಣ ಸಾಮರ್ಥ್ಯಕ್ಕೆ ಅವಕಾಶ ನೀಡುತ್ತದೆ ಎಂದರು.
ಕೃಷಿ ಕ್ಷೇತ್ರದ ಬಗ್ಗೆ ಉಲ್ಲೇಖಿಸಿದ ಪ್ರಧಾನಿ ಮೋದಿ, ಖಾದ್ಯ ತೈಲದಂತಹ ಕೃಷಿ ವಸ್ತುಗಳನ್ನು ಉತ್ಪಾದಿಸಲು ಮತ್ತು ಅವುಗಳ ಆಮದು ಕಡಿಮೆ ಮಾಡಲು ಪ್ರಯತ್ನಿಸಬೇಕು. ರೈತರಿಗೆ ಮಾರ್ಗದರ್ಶನ ನೀಡುವ ಮೂಲಕ ಇದನ್ನು ಮಾಡಬಹುದು. ಆಮದುಗಾಗಿ ಖರ್ಚು ಮಾಡುವ ಹಣವನ್ನು ರೈತರಿಗೆ ಹೋಗುವಂತೆ ಮಾಡಬಹುದು ಎಂದರು.
ಜನರ ಮೇಲಿನ ಅನುಸರಣೆ ಹೊರೆ ಕಡಿಮೆ ಮಾಡುವ ಅಗತ್ಯವನ್ನು ಒತ್ತಿಹೇಳಿದ ಪ್ರಧಾನಿ, ಇನ್ನು ಮುಂದೆ ಪ್ರಸ್ತುತವಾಗದ ನಿಯಮಗಳನ್ನು ಕಡಿಮೆ ಮಾಡಲು ಸಮಿತಿಗಳನ್ನು ರಚಿಸುವಂತೆ ರಾಜ್ಯಗಳಿಗೆ ಸೂಚಿಸಿದರು.

ಪ್ರಮುಖ ಸುದ್ದಿ :-   ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ ದಂಪತಿಗೆ ಗಂಡು ಮಗು ಜನನ : ಮಗುವಿಗೆ ವಿಭಿನ್ನ ಹೆಸರಿಟ್ಟ ದಂಪತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement