ಕೊರೊನಾ ಲಸಿಕೆ ಪಡೆಯಲು ಆರೋಗ್ಯ ಸಿಬ್ಬಂದಿ ನಿರಾಸಕ್ತಿ:ಸುಧಾಕರ ಬೇಸರ

posted in: ರಾಜ್ಯ | 0

ಬೆಂಗಳೂರು: ಕೋವಿಡ್ ಲಸಿಕೆ ಪಡೆಯಲು ಆರೋಗ್ಯ ಸಿಬ್ಬಂದಿ, ವೈದ್ಯರೇ ಹಿಂದೇಟು ಹಾಕುತ್ತಿರುವುದು ಲಸಿಕೆ ಅಭಿಯಾನಕ್ಕೆ ಸವಾಲಾಗಿ ಪರಿಣಮಿಸಿದೆ ಎಂದು ಕರ್ನಾಟಕದ ಆರೋಗ್ಯ ಸಚಿವ ಡಾ. ಕೆ. ಸುಧಾಕರ ತಿಳಿಸಿದ್ದಾರೆ.
ಲಸಿಕೆ ಅಭಿಯಾನ ಆರಂಭಗೊಂಡ ನಂತರ ಈವರೆಗೆ ನೋಂದಾಯಿತರಲ್ಲಿ ಶೇ. 51 ರಷ್ಟು ಮಂದಿ ಮಾತ್ರ ಲಸಿಕೆ ಪಡೆದುಕೊಂಡಿದ್ದಾರೆ. ಇದು ಅಭಿಯಾನದ ಯಶಸ್ಸಿನ ಬಗ್ಗೆ ಸಂದೇಹ ಮೂಡಿಸುತ್ತದೆ. ಮುಂದಿನ ದಿನಗಳಲ್ಲಿ ಆತಂಕ ಬಿಟ್ಟು ಲಸಿಕೆ ಪಡೆದುಕೊಳ್ಳುವಂತೆ ಆರೋಗ್ಯ ಸಿಬ್ಬಂದಿ ಹಾಗೂ ಕೋವಿಡ್ ವಾರಿಯರ್ಸ್‌ಗಳಿಗೆ ಸಚಿವರು ಕೋರಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಶೇ. 25 ಸಿಬ್ಬಂದಿ ಮಾತ್ರ ಲಸಿಕೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುದ್ದಿಗಳನ್ನು ನಂಬಬೇಡಿ. ಕೋವಿಡ್ ಲಸಿಕೆ ಸುರಕ್ಷಿತವಾಗಿದೆ. ಇದರಿಂದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳು, ತಜ್ಞ ವೈದ್ಯರು ಲಸಿಕೆ ಪಡೆದುಕೊಂಡಿದ್ದಾರೆ. ಎಂದರು.
ಲಸಿಕೆ ತೆಗೆದುಕೊಂಡವರಿಗೆ ಸೋಂಕು ಬರಬಹುದು, ಆದರೆ ಅಂಥವರ ಸಾವಿನ ಪ್ರಮಾಣ ತುಂಬಾ ಕಡಿಮೆಯಿದೆ. ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ವೈದ್ಯರು, ನರ್ಸ್, ಪ್ಯಾರಾ ಮೆಡಿಕಲ್ ಸಿಬ್ಬಂದಿ ಲಸಿಕೆ ತೆಗೆದುಕೊಳ್ಳಬೇಕು, ಅವರೇ ಲಸಿಕೆ ತೆಗೆದುಕೊಳ್ಳದಿದ್ರೆ ಸಾಮಾನ್ಯರು ಲಸಿಕೆ ಪಡೆಯಲು ಮುಂದೆ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಬೆಂಗಳೂರು ಟ್ರಾಫಿಕ್‌ನಲ್ಲಿ ಸಿಲುಕಿ ಸಮಯಕ್ಕೆ ಸರಿಯಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಸಾವು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement