ಕೊರೊನಾ ಸಂಕಷ್ಟ ಕಾಲದಲ್ಲಿ ಬಿಜೆಪಿಯಿಂದ ರಾಮ ಮಂದಿರ ದೇಣಿಗೆ ಸಂಗ್ರಹ: ಅಖಿಲೇಶ್‌ ಆರೋಪ

ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷ ಅಯೋಧ್ಯಾ ರಾಮಮಂದಿರಕ್ಕಾಗಿ ಜನರಿಂದ ದೇಣಿಗೆ ಪಡೆಯುತ್ತಿರುವುದನ್ನು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್‌ ಯಾದವ್‌ ಖಂಡಿಸಿದ್ದಾರೆ.
ವಿಪತ್ತಿನಿಂದ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕೆಂದು ಹೇಳುವ ಬಿಜೆಪಿ ಕೊವಿಡ್‌ ವಿಪತ್ತಿನ ಸಮಯದಲ್ಲಿ ಜನರಿಂದ ಮಂದಿರಕ್ಕಾಗಿ ದೇಣಿಗೆ ಪಡೆಯುತ್ತಿದೆ ಎಂದು ಆರೋಪ ಮಾಡಿದರು.
ಇತ್ತೀಚೆಗೆ ಸಂಸತ್ತಿನಲ್ಲಿ ಬಿಜೆಪಿ ಮುಖಂಡರನ್ನು ‘ಚಂದಾಜೀವಿ’ ಎಂದು ಜರಿದಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಯಾದವ್‌, ಪ್ರಾಚೀನ ಭಾರತೀಯ ಸಂಸ್ಕೃತಿಯಲ್ಲಿ, ಚಂದಾದಂತಹ ಯಾವುದೇ ವಿಷಯಗಳಿಲ್ಲ. ನಮ್ಮಲ್ಲಿ ದಕ್ಷಿಣೆ (ಅರ್ಪಣೆ) ಸಂಸ್ಕೃತಿ ಇದೆ. ಬಿಜೆಪಿ ಒಪ್ಪಿಕೊಂಡರೆ ದಕ್ಷಿಣೆ ನೀಡಲು ನಾವು ಸಿದ್ಧರಿದ್ದೇವೆ ಎಂದರು.
ಆರ್ಥಿಕ ವೈಫಲ್ಯದಲ್ಲಿ ತನ್ನ ವೈಫಲ್ಯವನ್ನು ಮರೆಮಾಡಲು ಬಿಜೆಪಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿದೆ. ರಾಷ್ಟ್ರ ನಿರ್ಮಾಣಕ್ಕಾಗಿ ಬೆಲೆ ಏರಿಕೆ ಎಂದು ಸರ್ಕಾರ ಹೇಳುತ್ತಿರುವುದು ವಿಷಾದಕರ ಮತ್ತು ನಾಚಿಕೆಗೇಡಿನ ಸಂಗತಿ ಎಂದು ತಿಳಿಸಿದರು.
ವಿಧಾನಸಭೆಯಲ್ಲಿ ಮಲಗುವವರನ್ನು ಜನರೇ ಶಿಕ್ಷಿಸುತ್ತಾರೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಕುರಿತು ಟೀಕೆ ಮಾಡಿದರು. ರೈತರಿಗೆ ಮೆಕ್ಕೆಜೋಳ, ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಸಿಗಲಿಲ್ಲ. ಆದರೂ ಮುಖ್ಯಮಂತ್ರಿ ವಿಧಾನಸಭೆಯಲ್ಲಿ ಸುಳ್ಳು ಹೇಳಿದ್ದಾರೆ ಎಂದರು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/
ಓದಿರಿ :-   ಮಹಾರಾಷ್ಟ್ರಕ್ಕೆ ದೇವೇಂದ್ರ ಫಡ್ನವೀಸ್ ಸಿಎಂ, ಏಕನಾಥ್ ಶಿಂಧೆ ಡೆಪ್ಯುಟಿ ಸಿಎಂ: ಮೂಲಗಳು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ