ಮೀಸಲಾತಿ ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಕಕ್ಕೆ ನಿರ್ಧಾರ

posted in: ರಾಜ್ಯ | 0

ಬೆಂಗಳೂರು: ಮೀಸಲಾತಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಬೀಸೋ ದೊಣ್ಣೆಯಿಂದ ಇದರಿಂದ ಪಾರಾಗಲು ಉನ್ನತ ಮಟ್ಟದ ಸಮಿತಿ ನೇಮಕ ಮಾಡಲು ಮುಂದಾಗಿದೆ.
ವೀರಶೈವ ಲಿಂಗಾಯತರು, ಒಕ್ಕಲಿಗರು, ಪಂಚಮಸಾಲಿಗಳು, ಕುರುಬರು, ವಾಲ್ಮೀಕಿ ಮತ್ತಿತರ ಹಿಂದುಳಿದ ಸಮುದಾಯಗಳು ಮೀಸಲಾತಿಗಾಗಿ ಬಿಗಿಪಟ್ಟು ಹಿಡಿದು ಒತ್ತಡ ಹೇರುತ್ತಿರುವುದರಿಂದ ಎದುರಾಗಿರುವ ಸಂಕಷ್ಟದಿಂದ ಪಾರಾಗಲು ಸರ್ಕಾರ ಉನ್ನತ ಸಮಿತಿ ರಚಿಸಲು ಮುಂದಾಗಿದೆ.
ಸಚಿವರುಗಳು, ನಿವೃತ್ತ ನ್ಯಾಯಮೂರ್ತಿಗಳು, ಕಾನೂನು ತಜ್ಞರು, ಸಂವಿಧಾನ ಪರಿಣಿತರು, ನಿವೃತ್ತ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಿ ಸಮುದಾಯಗಳ ಸ್ಥಿತಿಗತಿ ಸಾಮಾಜಿಕ ಪರಿಸ್ಥಿತಿ ಹಾಗೂ ಮತ್ತಿತರ ವಿಚಾರಗಳನ್ನು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಈ ಸಮಿತಿಗೆ ಜವಾಬ್ದಾರಿ ನೀಡಲಾಗುವುದು. ಸಮಿತಿ ರಚನೆ ಸಂಬಂಧ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ನಡೆಸಲಾಗಿದೆ. ಸಮಿತಿ ನೇಮಕದಿಂದ ಸರ್ಕಾರಕ್ಕೆ ಸಾಕಷ್ಟು ಕಾಲಾವಕಾಶ ಸಿಗಲಿದೆ.
ಹೀಗಾಗಿ ಸಮಿತಿ ರಚಿಸುವುದೇ ಸೂಕ್ತ ಎಂದು ಕೆಲ ಸಚಿವರು ಸಲಹೆ ನೀಡಿದ್ದರು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಕನಕಗುರು ಪೀಠದ ಶ್ರೀ ಕಾಗಿನೆಲೆ ನಿರಂಜನಾನಂದಪುರಿ ಶ್ರೀಗಳು, ಪಾದಯಾತ್ರೆ ಕೈಗೊಂಡು ಬೆಂಗಳೂರಿನಲ್ಲಿ ಸಮಾವೇಶ ನಡೆಸಿ ಕುರುಬರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಹಕ್ಕೊತ್ತಾಯ ಮಂಡಿಸಿದ ಬೆನ್ನಲ್ಲೇ ಲಿಂಗಾಯಿತ ಪಂಚಮಸಾಲಿ ಜಗದ್ಗುರು ಶ್ರೀ ಜಯಮೃತ್ಯುಂಜಯ ಸ್ವಾಮಿಗಳು ಜ.೧೪ರಿಂದ ಕೂಡಲ ಸಂಗಮದಿಂದ ಪಾದಯಾತ್ರೆ ಕೈಗೊಂಡು ಫೆ.೨೨ರಂದು ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ನಡೆಸಿ ಪಂಚಮಸಾಲಿಗಳನ್ನು ೨ಎ ಮೀಸಲಾತಿಗೆ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.
ಈ ಬೇಡಿಕೆ ಈಡೇರಿಸುವಲ್ಲಿ ಸರ್ಕಾರ ವಿಫಲವಾದರೆ ವಿಧಾನಸೌಧದ ಮುಂದೆ ಸತ್ಯಾಗ್ರಹ ನಡೆಸಲು ಶ್ರೀಗಳು ಮುಂದಾಗಿದ್ದಾರೆ.
ಪಂಚಮಸಾಲಿ ಶ್ರೀಗಳು ಪಾದಯಾತ್ರೆ ಕೈಗೊಳ್ಳುತ್ತಿದ್ದಂತೆಯೇ ವೀರಶೈವ ಲಿಂಗಾಯತ ಮಠಾಧೀಶರು ನಗರದಲ್ಲಿ ಸಭೆ ಸೇರಿ ತಮ್ಮ ಸಮುದಾಯವನ್ನು ಒಬಿಸಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಮಧ್ಯೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳ ನೇತೃತ್ವದಲ್ಲಿ ಒಕ್ಕಲಿಗರು ಸಭೆ ಸೇರಿ ಪ್ರತ್ಯೇಕ ನಿಗಮ ಸ್ಥಾಪನೆ ಹಾಗೂ ಮೀಸಲಾತಿ ಕಲ್ಪಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದರು. ಇವೆಲ್ಲದರ ಜೊತೆಗೆ ಭೋವಿ, ವಾಲ್ಮೀಕಿ ಹಾಗೂ ಮತ್ತಿತರ ಸಮುದಾಯಗಳ ಶ್ರೀಗಳು ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಆಗ್ರಹಿಸಿದ್ದು ಸರ್ಕಾರಕ್ಕೆ ಬಿಸಿತುಪ್ಪವಾಗಿದೆ.
ಈ ಎಲ್ಲಾ ಬೇಡಿಕೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಸಾಧಕ- ಬಾಧಕಗಳಿಗೆ ಅವಲೋಕಿಸಿ ಆಯಾಯ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಅಧ್ಯಯನ ನಡೆಸಿ ವರದಿಸಲ್ಲಿಸಲು ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಲು ಮುಂದಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಹಾವೇರಿ ಕಾಂಗ್ರೆಸ್​​​ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೇಮಠ ರಾಜೀನಾಮೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement