ರಾಜ್ಯ ಸರಕಾರಕ್ಕೆ ದುಡ್ಡು ಹೊಡೆಯೋದು ಮಾತ್ರ ಗೊತ್ತು: ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ಬಿಜೆಪಿ ಸರಕಾರಕ್ಕೆ ದುಡ್ಡು ಹೊಡೆಯುವುದು ಬಿಟ್ಟರೆ ಬೇರೆ ಯಾವ ಕೆಲಸವೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.
ಗಡಿ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆದರೆ ಸರಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಕೊರೊನಾ ಎರಡನೇ ಅಲೆ ಶುರುವಾಗುತ್ತದೆ ಎಂಬ ಅರಿವಿದ್ದರೂ ಮುಂಜಾಗ್ರತೆ ಕ್ರಮ ಕೈಗೊಳ್ಳುತ್ತಿಲ್ಲ. ಈಗಿನ ಸರ್ಕಾರಕ್ಕೆ ಗಂಭೀರತೆ ಎಂಬುದಿಲ್ಲ. ಅವರಿಗೆ ದುಡ್ಡು ಹೊಡೆಯುವುದರಲ್ಲಿ ಮಾತ್ರ ಸೀರಿಯಸ್ ನೆಸ್‌ ಇದೆ ಎಂದರು.
ಈಗಿನ ಸರ್ಕಾರಕ್ಕೆ ದುಡ್ಡು ಹೊಡೆಯುವುದು ಬಿಟ್ಟರೆ ಬೇರೆ ಕೆಲಸವಿಲ್ಲ, ಅಭಿವೃದ್ಧಿ ಕೆಲಸವಂತೂ ಮಾಡುತ್ತಲೇ ಇಲ್ಲ. ಎಲ್ಲಿ ಖರ್ಚು ಬರುತ್ತದೆ ಎಂಬುದನ್ನು ಅರಿತು ಮೊದಲು ಅಲ್ಲಿ ದುಡ್ಡು ಹೊಡೆಯುತ್ತಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಈ ಬಾರಿಯ ಬಜೆಟ್‌ ಕುರಿತು ಪ್ರತಿಕ್ರಿಯಿಸಿದ ಸಿದ್ದು, ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆಯೂ ಇಲ್ಲ ಎಂದರು. ಇರುವ ಕಾರ್ಯಕ್ರಮಗಳಿಗೆ ಹಣ ಹೊಂದಿಸಲು ಸರ್ಕಾರದ ಬಳಿ ದುಡ್ಡಿಲ್ಲ. ಕೊಡುವ ಅಕ್ಕಿಯನ್ನೇ ಕಡಿಮೆ ಮಾಡಬೇಕು ಅಂತಿದ್ದಾರೆ. ಬಜೆಟ್‌ನಿಂದ ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದರು.

ಪ್ರಮುಖ ಸುದ್ದಿ :-   ಅತ್ಯಾಚಾರ ಆರೋಪ: ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಎಫ್‌ಐಆ‌ರ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement