ಸಂಸದರು ಭಾರತೀಯ ಭಾಷೆಗಳ ಉಳಿವಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು : ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ನವದೆಹಲಿ: ಸಂಸದರು ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕು ಹಾಗೂ ಭಾಷೆಗಳ ಪ್ರಚಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.
ಫೆ.೨೧ರಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನದ ಅಂಗವಾಗಿ ಸಂಸದರಿಗೆ ಪತ್ರ ಬರೆದಿದ್ದಾರೆ. ನಾವು ಮೊದಲು ಮಾತನಾಡುವ ಭಾಷೆಯೇ ಮಾತೃ ಭಾಷೆ. ಮಾತೃಭಾಷೆಯನ್ನು ಉಳಿಸಿ ಬೆಳೆಸಬೇಕು. ಮಾತೃ ಭಾಷೆ ನಮ್ಮ ಸಾಹಿತ್ಯ ಕೌಶಲ, ಶೈಕ್ಷಣಿಕ ಜ್ಞಾನವನ್ನು ಹೆಚ್ಚಿಸುತ್ತದೆ. ಮತ್ತೊಂದು ಭಾಷೆ ಕಲಿಯಲು ಸಹಾಯಕವಾಗುತ್ತದೆ ಎಂದು ತಿಳಿಸಿದ್ದಾರೆ.
ನಮ್ಮ ಮಾತೃ ಭಾಷೆ ಹಾಗೂ ಸ್ಥಳಿಯ ಭಾಷೆಗಳನ್ನು ನಿರ್ಲಕ್ಷಿಸಿದರೆ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಈ ಭಾಷೆಗಳೊಂದಿಗೆ ಹೊಂದಿಕೊಂಡಿರುವ ಸಂಸ್ಕೃತಿಯ ಮಾಹಿತಿ ಕೂಡ ಸಿಗದಂತಾಗುತ್ತದೆ. ಸುಮಾರು ೨೦೦ ಭಾರತೀಯ ಭಾಷೆಗಳು ಅಳಿವಿನಂಚಿನಲ್ಲಿವೆ. ಪ್ರತಿ ೨ ವಾರಗಳಿಗೊಂದು ವಿಶ್ವದ ಭಾಷೆ ಅಳಿವಿನಂಚಿಗೆ ಸೇರುತ್ತಿದೆ ಎಂದು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದ್ದನ್ನು ನಾಯ್ಡು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement