ಸಿದ್ದು ಮುಂದಿನ ಸಿಎಂ ಎಂದು ಜಮೀರ್‌ ಹೇಳಿದ್ದರಲ್ಲಿ ತಪ್ಪಿಲ್ಲ

ಬೆಳಗಾವಿ: ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಶಾಸಕ ಜಮೀರ್‌ ಅಹ್ಮದ್‌ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಮಂದಿನ ಮುಖ್ಯಮಂತ್ರಿ ನೀವೇ ಎಂದು ಕೆಲವು ಅಭಿಮಾನಿಗಳು ನನಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳಿಸುತ್ತಾರೆ. ಜಮೀರ್‌ ಅಹ್ಮದ್‌ ಅವರು ಸಿದ್ದರಾಮಯ್ಯ ಅವರ ಅಭಿಮಾನಿ. ಆದ್ದರಿಂದ ಜಮೀರ್‌ ಹೇಳಿಕೆಯಲ್ಲಿ ಏನೂ ತಪ್ಪಿಲ್ಲ. ಮುಂದಿನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ ಯಾರೆಂಬುದು ಹೈಕಮಾಂಡ್‌ ಹೇಳಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ೧೧೩ ಕ್ಷೇತ್ರಗಳಲ್ಲಿ ಜಯ ಸಾಧಿಸಿದ ನಂತರ ಮುಖ್ಯಮಂತ್ರಿ ಯಾರಾಗಬೇಕೆಂಬುದನ್ನು ಪಕ್ಷದ ಮುಖಂಡರು ನಿರ್ಧರಿಸುತ್ತಾರೆ.
ಅಹಿಂದ ಸಮಾವೇಶ ನಡೆಸುವ ಬಗ್ಗೆ ಎಲ್ಲಿಯೂ ಚರ್ಚೆ ಆಗಿಲ್ಲ ಎಂಬುದನ್ನು ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು. ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಬಗ್ಗೆ ಮಾತನಾಡಿ, ನೀರಲ್ಲಿ ಹಣ ಎಸೆಯುವ ಜನರು ನಮ್ಮಲ್ಲಿದ್ದಾರೆ. ಎಲ್ಲೆಲ್ಲಿಯೋ ಅನವಶ್ಯಕವಾಗಿ ಖರ್ಚು ಮಾಡುವ ಜನರಿದ್ದಾರೆ. ರಾಮ ಮಂದಿರಕ್ಕೆ ದೇಣಿಗೆ ನೀಡುವುದು ಬಿಡುವುದು ಅವರವರ ಆಯ್ಕೆಗೆ ಬಿಟ್ಟಿದ್ದು. ನನ್ನ ಬಳಿಯೂ ದೇಣಿಗೆ ಕೇಳಲು ಬಂದಿದ್ದರು. ದೇಣಿಗೆ ಕೊಡಬೇಕೋ ಬೇಡವೋ ಇನ್ನೂ ನಿರ್ಧರಿಸಿಲ್ಲ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ವಾಹನಗಳಿಗೆ ಕಣ್ಣುಕುಕ್ಕುವ ಎಲ್‌ಇಡಿ ಲೈಟ್‌ ಹಾಕಿಸಿದ್ದೀರಾ : ಜುಲೈ 1ರಿಂದ ಬೀಳಲಿದೆ ದಂಡ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement