ಹೊಸ ಧರ್ಮಗಳ ಉದಯ ಪಾಠ ಕೈಬಿಟ್ಟಿಲ್ಲ:ಸಚಿವರ ಸ್ಪಷ್ಟನೆ

ಬೆಂಗಳೂರು : ರಾಜ್ಯದ 6ನೇ ತರಗತಿಯ ಸಮಾಜ ವಿಜ್ಞಾನ ಭಾಗ-2ರಲ್ಲಿ ಹೊಸ ಧರ್ಮಗಳ ಉದಯ ಪಾಠ ಕೈಬಿಟ್ಟಿಲ್ಲ. ಅದರಲ್ಲಿದ್ದ ವಿವಾದಿತ ಅಂಶಗಳನ್ನು ಮಾತ್ರವೇ ತೆಗೆದಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು(ಆಡಳಿತ ಮತ್ತು ಅಭಿವೃದ್ಧಿ ಸಾರ್ವಜನಿಕ ಶಿಕ್ಷಣ ಇಲಾಖೆ) ಅವರಿಗೆ ಸುತ್ತೋಲೆ ಹೊರಡಿಸಿದ್ದು, 6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ಪಾಠ-7, ಹೊಸಧರ್ಮಗಳ ಉದಯ ಈ ಪಾಠದಲ್ಲಿನ ಪುಟ ಸಂಖ್ಯೆ 82 ಹಾಗೂ 83ರಲ್ಲಿನ ವಿಷಯಾಂಶಗಳನ್ನು, 2020-21ನೇ ಶೈಕ್ಷಣಿಕ ಸಾಲಿಗೆ ಬೋಧನೆ, ಕಲಿಕೆಗೆ, ಮೌಲ್ಯಮಾಪನಕ್ಕೆ ಪರಿಗಣಿಸದಿರುವಂತೆ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರಿಗೆ ಸೂಕ್ತ ಸೂಚನೆ ನೀಡಲು ತಿಳಿಸಿದ್ದಾರೆ. ಇದರಿಂದಾಗಿ ರಾಜ್ಯದ ಅನೇಕ ಚಿಂತಕರು, ಸಮುದಾಯದ ಮುಖಂಡರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವಂತ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಹೊಸ ಧರ್ಮಗಳ ಉದಯ ಪಾಠವನ್ನು 6ನೇ ತರಗತಿಯ ಸಮಾಜ ವಿಜ್ಞಾನ ಭಾಗ-2ರಲ್ಲಿ ತೆಗೆದು ಹಾಕಿಲ್ಲ. ಆದರೆ ಆ ಪಾಠದಲ್ಲಿದ್ದಂಥ ಕೆಲ ಸಮುದಾಯದ ಬಗೆಗಿನ ವಿವಾದಿತ ಅಂಶಗಳನ್ನು ಮಾತ್ರವೇ ತೆಗೆದು ಹಾಕಲಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸರ್ಕುಳಿ ಸೇತವೆ ಮೇಲೆ 3 ಅಡಿಗಳಷ್ಟು ನೀರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement