ಹೊಸ ವ್ಯಾಜ್ಯ ನಿರ್ವಹಣಾ ನೀತಿ ಜಾರಿ: ಬೊಮ್ಮಾಯಿ

ಕಾರ್ಕಳ : ಶೀಘ್ರದಲ್ಲಿ ಹೊಸ ವ್ಯಾಜ್ಯ ನಿರ್ವಹಣಾ ನೀತಿ ಜಾರಿಗೆ ತರಲಾಗುತ್ತದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾರ್ಕಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೋರ್ಟ್ ಕಾಂಪ್ಲೆಕ್ಸ್ ಕಟ್ಟಡ ಉದ್ಘಾಟನೆಯ ಬಳಿಕ ಮಾತನಾಡಿದ ಅವರು,
ಈಗಾಗಲೇ ವ್ಯಾಜ್ಯ ನಿರ್ವಹಣೆ ನೀತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿವಿಧ ಇಲಾಖೆಗಳ ನಡುವೆ ಹೆಚ್ಚಿರುವ ವ್ಯಾಜ್ಯಗಳ ಸಂಖ್ಯೆ ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ. ರಾಜ್ಯದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ್ ಅವರು ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ವಿವಿಧ ಇಲಾಖೆಗಳ ನಡುವೆ ವ್ಯಾಜ್ಯಗಳ ಸಂಖ್ಯೆ ಹೆಚ್ಚಿವೆ. ಇದನ್ನು ಕಡಿಮೆ ಮಾಡಬೇಕು. ಜೊತೆಗೆ ಜನ ಮಾನ್ಯರು ದಾಖಲು ಮಾಡಿರುವ ವ್ಯಾಜ್ಯಗಳು ಕಡಿಮೆ ಆಗಬೇಕು. ಅದಕ್ಕಾಗಿ ರಾಜ್ಯದಲ್ಲಿ ಹೊಸ ವ್ಯಾಜ್ಯ ನಿರ್ವಹಣಾ ನೀತಿಯನ್ನು ಜಾರಿಗೆ ತರಲಾಗುತ್ತದೆ ಎಂದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement