ಪಂಚ ರಾಜ್ಯಗಳಲ್ಲಿ ಮತ್ತೆ ಕೊರೊನಾ ಅಬ್ಬರ

ಕೇರಳ, ಮಹಾರಾಷ್ಟ್ರ, ಪಂಜಾಬ್‌, ಛತ್ತೀಸ್‌ಗಢ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿ ದೈನಂದಿನ ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಪಂಜಾಬ್‌ನಲ್ಲಿ 383 ಹೊಸ ಪ್ರಕರಣಗಳು ವರದಿಯಾಗಿದ್ದರೆ, ಛತ್ತೀಸಗಢದಲ್ಲಿ 259 ಹೊಸ ಪ್ರಕರಣಗಳು ಮತ್ತು ಮಧ್ಯಪ್ರದೇಶದಲ್ಲಿ 297 ಹೊಸ ಪ್ರಕರಣಗಳು ವರದಿಯಾಗಿವೆ.
ದೇಶಾದ್ಯಂತ ಶನಿವಾರ 13,993 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 1,09,77,387 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. ಕಳೆದ 24 ಗಂಟೆಗಳಲ್ಲಿ 101 ಸಾವುಗಳೊಂದಿಗೆ, ಒಟ್ಟು ಸಾವಿನ ಸಂಖ್ಯೆ 1,56,212 ಕ್ಕೆ ತಲುಪಿದೆ.
ದೇಶದಲ್ಲಿ 1,43,127 ಸಕ್ರಿಯ ಕೊರೊನಾ ಸೋಂಕು ಪ್ರಕರಣಗಳಿದ್ದು, ಒಟ್ಟು 1,06,78,048 ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ.
ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಈವರೆಗೆ 1,07,15,304 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement