ಪೆಟ್ರೋಲ್, ಡೀಸೆಲ್‌ ಬೆಲೆ ಹೆಚ್ಚಳ: ನಿರ್ಮಲಾ ಬೇಸರ

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬೇಸರದ ಸಂಗತಿ ಎಂದು ಹೇಳಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಮುಂದಿನ ದಿನಗಳಲ್ಲಿ ಇಂಧನ ಬೆಲೆ ಇಳಿಸುವುದೇ ಇದಕ್ಕೆ ಉತ್ತರವಾಗಲಿದೆ ಎಂದು ಅಭಿಪ್ರಾಪಟ್ಟಿದ್ದಾರೆ.
ಗ್ರಾಹಕರಿಗೆ ಇಂಧನವನ್ನು ಯೋಗ್ಯ ಬೆಲೆಗೆ ಒದಗಿಸುವ ದಿಸೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಚರ್ಚೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಮುಂಬೈನಲ್ಲಿ ಪೆಟ್ರೋಲ್‌ ಬೆಲೆ ಲೀಟರ್‌ಗೆ ೯೬ ರೂ. ಆಗಿದೆ. ಕಳೆದ ೧೧ ದಿನಗಳಲ್ಲಿ ಪೆಟ್ರೋಲ್‌ ಬೆಲೆ ಪ್ರತಿ ಲೀಟರ್‌ಗೆ ರೂ.೩.೨೪ರಷ್ಟು ಹೆಚ್ಚಳವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರಲ್‌ಗೆ ೫೬ ಡಾಲರ್‌ ಹೆಚ್ಚಳಗೊಂಡಿದೆ.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

ನಿಮ್ಮ ಕಾಮೆಂಟ್ ಬರೆಯಿರಿ

advertisement