ಪ್ರತಿಭಟನಾನಿರತ ರೈತ ಮುಖಂಡರನ್ನು ಭೇಟಿ ಮಾಡಲಿರುವ ದೆಹಲಿ ಸಿಎಂ ಕೇಜ್ರಿವಾಲ್‌

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾನುವಾರ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ಆಂದೋಲನದ ಮುಖಂಡರನ್ನು ಭೇಟಿ ಮಾಡಲಿದ್ದಾರೆ.
ದೆಹಲಿ ವಿಧಾನಸಭೆ ಸಭಾಂಗಣದಲ್ಲಿ ಭಾನುವಾರ ಕೇಜ್ರಿವಾಲ್‌, ಹೋರಾಟ ನಿರತ ರೈತರನ್ನು ಭೇಟಿ ಮಾಡಿ ಕೃಷಿ ಕಾನೂನುಗಳು ಹಾಗೂ ರೈತರ ಕಾಳಜಿ ಕುರಿತು ಚರ್ಚಿಸಲಿದ್ದಾರೆ.
ಕಳೆದ ಡಿಸೆಂಬರ್‌ನಲ್ಲಿ, ದೆಹಲಿ ವಿಧಾನಸಭೆಯ ಅಧಿವೇಶನದಲ್ಲಿ, ಸಿಎಂ ಕೇಜ್ರಿವಾಲ್ ಅವರು ವಿವಾದಾತ್ಮಕ ಶಾಸನದ ವಿರುದ್ಧದ ಪ್ರತಿಭಟಿಸುವ ಉದ್ದೇಶದಿಂದ ಮೂರು ಕೃಷಿ ಕಾನೂನುಗಳ ಪ್ರತಿಗಳನ್ನು ಹರಿದು ಹಾಕಿದ್ದರು ಮತ್ತು ಕಾನೂನುಗಳನ್ನು ತಕ್ಷಣವೇ ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದರು.
ರೈತ ಸಂಘಟನೆಗಳು ಮತ್ತು ಕೇಂದ್ರ ಸರಕಾರ ಈವರೆಗೆ 11 ಸುತ್ತಿನ ಮಾತುಕತೆ ನಡೆಸಿವೆ. ಆದರೆ ಯಾವುದೇ ಇತ್ಯರ್ಥಕ್ಕೆ ಬಂದಿಲ್ಲ. ಹೊಸ ಕಾನೂನುಗಳನ್ನು ೧೮ ತಿಂಗಳ ಕಾಲ ಸ್ಥಗಿತಗೊಳಿಸಲು ಕೇಂದ್ರವು ಮುಂದಾಗಿದೆ, ಆದರೆ ರೈತರು ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ದೆಹಲಿ ಗಡಿಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ರೈತರು ಕಳೆದ ೨ ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement