ಫೆ.೨೩ರಂದು ಬೆಂಗಳೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿಭಟನೆ

ಬೆಂಗಳೂರು: ಶಿಕ್ಷಣ ಇಲಾಖೆಯ ದ್ವಂದ್ವ ನಿಲುವು, ಅವೈಜ್ಞಾನಿಕ ಧೋರಣೆಗಳನ್ನು ಖಂಡಿಸಿ ರಾಜ್ಯ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆ ವತಿಯಿಂದ ಫೆ.೨೩ರಂದು ಪ್ರತಿಭಟನಾ ರ್ಯಾಲಿ ಹಾಗೂ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಫೆ.೨೩ರಂದು ಬೆಳಗ್ಗೆ ೧೦ ಗಂಟೆಗೆ ನಗರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ರ್ಯಲಿ ನಡೆಯಲಿದ್ದು, ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ. ನಂತರ ಸಮಾವೇಶ ನಡೆಯಲಿದೆ. ಸರಕಾರದ ನಿಯಮಗಳು ಖಾಸಗಿ ಶಾಲೆಗಳನ್ನು ಸಂಕಷ್ಟಕ್ಕೀಡು ಮಾಡಿವೆ. ಶುಲ್ಕ ಕಡಿತ ಹಾಗೂ ಹೊಸ ಶಾಲೆಗಳ ನಿಯಮಗಳಿಂದಾಗಿ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೇಡಿಕೆಗಳಿಗೆ ಶಿಕ್ಷಣ ಸಚಿವರು ಸ್ಪಂದಿಸದಿದ್ದರಿಂದ ಪ್ರತಿಭಟನಾ ರ್ಯಾಲಿ ನಡೆಯಲಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement