ಫೆ.22ರಿಂದ ಇಂದ್ರಧನುಷ್ ಲಸಿಕೆ ಅಭಿಯಾನ

ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಎರಡು ವರ್ಷದ ಮಕ್ಕಳಿಗೆ ಇಂದ್ರಧನುಷ್ ಲಸಿಕೆ ಅಭಿಯಾನ ಫೆ.22ರಿಂದ 24ರ ವರೆಗೆ ನಡೆಯಲಿದೆ.
ಎರಡು ವರ್ಷಗಳ ಮಕ್ಕಳು ಮತ್ತು ಗರ್ಭಿಣಿಯರಿಗೆ ಈ ಲಸಿಕೆಯನ್ನು ನೀಡಲಾಗುತ್ತಿದ್ದು, ಫೆ.೨೧ರಂದು ಕಲಬುರಗಿಯಲ್ಲಿ ಸಾಂಕೇತಿಕವಾಗಿ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ತಿಳಿಸಿದರು.
ಇಂದ್ರಧನುಷ್ ಅಭಿಯಾನಕ್ಕೆ ರಾಜ್ಯದ 13 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು ನಗರ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಅಭಿಯಾನ ನಡೆಯಲಿದೆ ಎಂದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆಯ್ಕೆ ಮಾಡಲಾಗಿದೆ. ಲಸಿಕೆ ವಂಚಿತರಾಗಿರುವ ಮತ್ತು ಬಿಟ್ಟುಹೋಗಿರುವ ಫಲಾನುಭವಿಗಳನ್ನು ಗುರುತಿಸಿ ಈ ಜಿಲ್ಲೆಗಳಲ್ಲಿ ಲಸಿಕೆ ನೀಡಲಾಗುತ್ತದೆ. ಕೋವಿಡ್-19ನಿಂದಾಗಿ ಸಾರ್ವತ್ರಿಕ ಲಸಿಕೆ ತಪ್ಪಿರುವ ಹಳ್ಳಿಗಳು ಮತ್ತು ಪ್ರದೇಶಗಳು, ವಲಸಿಗರನ್ನು ಹೊಂದಿರುವ ನಗರಪ್ರದೇಶಗಳ ಸ್ಲಂಗಳು, ಮತ್ತಿತರ ಪ್ರದೇಶಗಳಲ್ಲಿ ಈ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.
ಪ್ರಮುಖವಾಗಿ ದಡಾರ, ಗಂಟಲುಬೇನೆ ಧನುರ್ವಾಯು, ಕ್ಷಯ ರೋಗಕ್ಕೆ ಇಂದ್ರಧನುಷ್ ಲಸಿಕೆ ರಾಮಬಾಣವಾಗಲಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement