ಆರ್ ಟಿ ಪಿಸಿಆರ್ ಪರೀಕ್ಷೆ ಹೆಚ್ಚಿಸಿ: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

ದೇಶದಲ್ಲಿ ಕೊರೊನಾ ಸೋಂಕು ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಆರ್ ಟಿ ಪಿಸಿಆರ್ ಪರೀಕ್ಷೆಗಳನ್ನು ನಡೆಸಲು ರಾಜ್ಯಗಳು ಗಮನಹರಿಸಬೇಕೆಂದು ಕೇಂದ್ರ ಸರ್ಕಾರ ಸೂಚಿಸಿದೆ.
ಆರ್ ಟಿ ಪಿಸಿಆರ್ ಪರೀಕ್ಷೆಗಳನ್ನು ಹೆಚ್ಚು ಹೆಚ್ಚು ನಡೆಸಬೇಕು ಹಾಗೂ ಕಡ್ಡಾಯವಾಗಿ ನೆಗೆಟಿವ್ ಫಲಿತಾಂಶ ಪ್ರಮಾಣವನ್ನು ದೃಢಪಡಿಸಿಕೊಳ್ಳಬೇಕೆಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಕಳೆದ ಕೆಲ ದಿನಗಳಿಂದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದೇಶದ ಶೇ. ೭೪ರಷ್ಟು ಸೋಂಕು ಪ್ರಕರಣ ಕಂಡುಬರುತ್ತಿದೆ.
ಛತ್ತೀಸ್ ಗಢ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲೂ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಪಂಜಾಬ್ ಮತ್ತು ಜಮ್ಮು – ಕಾಶ್ಮೀರಗಳಲ್ಲೂ ಹೊಸಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿಯ ಪ್ರಕಾರ ಈ ಎಲ್ಲಾ ರಾಜ್ಯಗಳಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಹೆಚ್ಚು ಗಮನಹರಿಸಬೇಕೆಂದು ಕೇಂದ್ರ ಸೂಚಿಸಿದೆ.
ಪ್ರಮುಖವಾಗಿ ಆರ್ ಟಿ ಪಿಸಿಆರ್ ಪರೀಕ್ಷೆ ಪ್ರಮಾಣ ಹೆಚ್ಚಳ, ನೆಗೆಟಿವ್ ವರದಿಗಳು ಲಭಿಸಿದರೂ ಸಹ, ಫಲಿತಾಂಶವನ್ನು ಅನುಸರಿಸುವುದು ಮತ್ತು ಯಾವುದೇ ವ್ಯಕ್ತಿ ಪರೀಕ್ಷೆಯಿಂದ ತಪ್ಪಿಸಿಕೊಳ್ಳಬಾರದು. ಆಯ್ದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಾದ ನಿಯಂತ್ರಣ ಕೇಂದ್ರ ಸ್ಥಾಪನೆ, ಜೀನೋಮ್ ಸಿಕ್ವೆನ್ಸಿಂಗ್ ಪರೀಕ್ಷೆ ಮೂಲಕ ರೂಪಾಂತರ ತಳಿಗಳ ನಿಯಮಿತ ಮೇಲ್ವಿಚಾರಣೆ, ಹೊಸಪ್ರಕರಣಗಳ ಮೇಲೆ ಮೇಲ್ವಿಚಾರಣೆ ನಡೆಸಬೇಕೆಂದು ಸೂಚಿಸಿದೆ.
ಹೆಚ್ಚು ಸಾವು ಪ್ರಕರಣಗಳು ವರದಿಯಾಗುವ ಆಸ್ಪತ್ರೆಗಳ ಮೇಲೆ ಹೆಚ್ಚು ಗಮನ ಹರಿಸಬೇಕು. ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ನಾಲ್ಕು ವಾರಗಳಲ್ಲಿ ಪ್ರತಿವಾರ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸೋಂಕು ನಿಯಂತ್ರಣಕ್ಕೆ ಹೆಚ್ಚು ಗಮನ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement