ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಚಿವ ಧ್ರುವನಾರಾಯಣ್ ಭಾನುವಾರ ಅಧಿಕಾರ ಸ್ವೀಕರಿಸಿದರು.
ನಗರದ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಘೋಷಣೆ ನಡುವೆ ಪಕ್ಷದ ನೂತನ ಕಾರ್ಯಾಧ್ಯಕ್ಷರ ಜವಾಬ್ದಾರಿಯನ್ನು ಮಾಜಿ ಸಚಿವ ರಾಮಾಲಿಂಗಾರೆಡ್ಡಿ ಹಾಗೂ ಮಾಜಿ ಸಂಸದ ಧ್ರುವನಾರಾಯಣ್ ವಹಿಸಿಕೊಂಡರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರುಗಳ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಧ್ರುವ ನಾರಾಯಣ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಕಾರ್ಯಾಧ್ಯಕ್ಷರ ಕಾರ್ಯಾಭಾರವನ್ನು ವಹಿಸಿದರು.
ಈ ಸಮಯದಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಆಡಳಿತ ತರುವ ಸಂಕಲ್ಪವನ್ನು ಮಾಡಲಾಯಿತು. ಕಾರ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ರಾಮಲಿಂಗಾರೆಡ್ಡಿ, ಧ್ರುವ ವನಾರಾಯಣ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿದರು.
ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಎಸ್.ಆರ್ ಪಾಟೀಲ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ ಸೇರಿದಂತೆ ಪಕ್ಷದ ಪ್ರಮುಖರು ಇದ್ದರು.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ