ಕೇಂದ್ರ-ರಾಜ್ಯದ ಬಿಜೆಪಿ ಸರ್ಕಾರಗಳೇ ಕಾಂಗ್ರೆಸಿಗೆ ಅವಕಾಶ ಮನೆ ಬಾಗಿಲಿಗೆ ತಂದುಕೊಂಡುತ್ತಿವೆ:ಡಿಕೆಶಿ

posted in: ರಾಜ್ಯ | 0

ಬೆಂಗಳೂರು: ಕಾಂಗ್ರೆಸಿಗರು ಅವಕಾಶಗಳನ್ನು ಹುಡುಕಿಕೊಂಡು ಹೋಗಬೇಕಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳೇ ನಮ್ಮ ಮನೆ ಬಾಗಿಲಿಗೆ ಅವಕಾಶಗಳನ್ನು ತಂದು ಕೊಡುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಭಾನುವಾರ ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ದೇಶದಲ್ಲಿ ಯಾವ ವರ್ಗವು ಕೂಡ ನೆಮ್ಮದಿಯಿಂದ ಇಲ್ಲ. ರೈತರು, ಕಾರ್ಮಿಕರು, ಮಹಿಳೆಯರು, ದಲಿತರು ಎಲ್ಲರೂ ಅನ್ಯಾಯವನ್ನು ವಿರೋಧಿಸಿ ಬೀದಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ವ್ಯಾಪಾರಿಗಳು ಕೂಡ ನೆಮ್ಮದಿಯಿಂದ ಇಲ್ಲ. ಆಸ್ತಿವಂತರೂ ಕೂಡ ತೆರಿಗೆ ಹೆಚ್ಚಳ ಖಂಡಿಸಿ ಪ್ರತಿಭಟಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆಯಂತೂ ಗಗನ ಮುಖಿಯಾಗಿದ್ದು, ಇದರಿಂದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೀಗಾಗಿ ಬಿಜೆಪಿ ವಿರುದ್ಧ ಜನಾಕ್ರೋಶ ತೀವ್ರವಾಗಿದೆ. ರಾಜಕೀಯದಲ್ಲಿ ಯಾರೂ ಹುಡುಕಿಕೊಂಡು ಬಂದು ಅವಕಾಶನ್ನು ನೀಡುವುದಿಲ್ಲ. ನೀವೇ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕೆಂದು ದಿ. ಇಂದಿರಾಗಾಂಧಿ ಅವರು ಹೇಳಿದ್ದರು. ಆದರೆ, ಈಗ ಬಿಜೆಪಿಯವರೇ ಅವಕಾಶಗಳನ್ನು ನಮ್ಮ ಮನೆ ಬಾಗಿಲಿಗೆ ತಂದಿದ್ದಾರೆ ಎಂದರು.
ನನಗೆ ಮುಖ್ಯಮಂತ್ರಿಯಾಗುವ ಆಸೆ ಇಲ್ಲ: ನಾನು ಇಲ್ಲಿಗೆ ಬಂದಾಗ ಮುಂದಿನಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಎಂದು ಜೈಕಾರ ಕೂಗಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಕಾಂಗ್ರೆಸನ್ನು ಮರಳಿ ಅಧಿಕಾರಕ್ಕೆ ತರುವ ದೀಕ್ಷೆ ನೀಡಿದ್ದಾರೆ. ಅದನ್ನು ಈಡೇರಿಸಲು ನಾವು ಶ್ರಮಿಸಬೇಕು. ಇಲ್ಲಿ ನಾನು ಮುಖ್ಯಮಂತ್ರಿಯಾಗಬೇಕು, ಮೊತ್ತೊಬ್ಬರಿಗೆ ಅಧಿಕಾರ ಸಿಗಬೇಕು ಎಂಬುದಲ್ಲ. ಕಾಂಗ್ರೆಸ್‍ನ ಕಾರ್ಯಕ್ರಮಗಳು ಜಾರಿಯಾಗಬೇಕು. ಈಗಾಗಲೇ 9 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗಿದ್ದು, ಮುಂದಿನ ದಿನಗಳಲ್ಲೂ ಪ್ರವಾಸ ಮಾಡುತ್ತೇವೆ. ಈ ವರ್ಷ ನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದರು. ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಎಚ್.ಕೆ.ಪಾಟೀಲ್, ದಿನೇಶ್‍ಗುಂಡೂರಾವ್, ಬಿ.ಕೆ.ಹರಿಪ್ರಸಾದ್, ಡಾ.ಜಿ.ಪರಮೇಶ್ವರ್, ವೀರಪ್ಪಮೊಯ್ಲಿ ಅವರುಗಳನ್ನು ಬೇರೆ ಬೇರೆ ರಾಜ್ಯಗಳಿಗೆ ಉಸ್ತುವಾರಿಗಳನ್ನಾಗಿ ನೇಮಿಸಿರುವುದಕ್ಕೆ ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ರಾಮಲಿಂಗಾರೆಡ್ಡಿ ಮತ್ತು ಧ್ರುವನಾರಾಯಣ ಅವರ ಅಧಿಕಾರ ಸ್ವೀಕಾರ ಸಮಾರಂಭ ನಡೆಯುತ್ತಿದೆ ಎಂದು ಬಂದೆ. ನನಗೆ ಅಭಿನಂದನೆ ನಡೆಯುತ್ತದೆ ಎಂಬುದು ಗೊತ್ತಿರಲಿಲ್ಲ. ನಿರೀಕ್ಷೆಯನ್ನೂ ಮಾಡಿರಲಿಲ್ಲ ಎಂದರು.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ವಿಧಾನಸಭೆ ಚುನಾವಣೆ ಮುಗಿದ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದರು. ಬಹುಮತ ಸಾಬೀತು ಪಡಿಸಲಾಗದೆ ರಾಜೀನಾಮೆ ಕೊಟ್ಟರು. ನಂತರ ನಮ್ಮ 14 ಮತ್ತು ಜೆಡಿಎಸ್ ಮೂವರು ಶಾಸಕರನ್ನು ಕೋಟ್ಯಂತರ ರೂ. ಖರ್ಚು ಮಾಡಿ ಖರೀದಿಸಿ ಮತ್ತೆ ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಟೇಕ್ ಆಫ್ ಆಗಿಲ್ಲ ಎಂದು ಬಿಜೆಪಿಯವರು ಟೀಕೆ ಮಾಡುತ್ತಿದ್ದರು. ಈಗ ಯಡಿಯೂರಪ್ಪ ಅವರ ಸರ್ಕಾರದ ಬಸ್ ಕೆಟ್ಟು ನಿಂತಿದೆ. ಯಡಿಯೂರಪ್ಪ ಅವರಿಗೆ ಗೇರ್ ಹಾಕಲೂ ಬರುತ್ತಿಲ್ಲ ಎಂದು ಲೇವಡಿ ಮಾಡಿದರು.
ಎಐಸಿಸಿ ಕಾರ್ಯದರ್ಶಿ ಸಂದೀಪ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ, ಮಾಜಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ. ಪಾಟೀಲï, ದಿನೇಶ್ ಗುಂಡೂರಾವ್, ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಬಿ.ಎಲï.ಶಂಕರ್, ಸಹ ಅಧ್ಯಕ್ಷ ವಿ.ಆರ್.ಸುದರ್ಶನ್, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ್ ಮೊದಲಅದವರಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ, ಭಾರೀ ಗಾಳಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಿಗೆ ಮುನ್ಸೂಚನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement