ಕೇರಳದಲ್ಲಿ ಬಿಜೆಪಿ ಪ್ರಬಲ ಸ್ಪರ್ಧೆ ನೀಡುವ ಪಕ್ಷವಲ್ಲ: ತರೂರ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕೆಲ ಕ್ಷೇತ್ರಗಳನ್ನು ಹೊರತುಪಡಿಸಿದರೆ ಬಿಜೆಪಿ ಪ್ರಬಲ ಸ್ಪರ್ಧಿಯಲ್ಲ ಎಂದು ಹೇಳಿದ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌, ಮೆಟ್ರೋಮ್ಯಾನ್‌ ಇ. ಶ್ರೀಧರನ್‌ ಬಿಜೆಪಿ ಸೇರಿದರೆ ಚುನಾವಣೆಯಲ್ಲಿ ಹೆಚ್ಚಿನ ಪರಿಣಾಮವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
2016ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಗೆಲ್ಲಲು ಹರಸಾಹಸ ಮಾಡಿದ ಬಿಜೆಪಿ ರಾಜ್ಯದಲ್ಲಿ ಪ್ರಬಲ ಸ್ಪರ್ಧೆ ನೀಡುವ ಪಕ್ಷವಲ್ಲ. ಶ್ರೀಧರನ್ ರಾಜಕೀಯ ರಂಗಕ್ಕೆ ಪ್ರವೇಶಿಸಿ ಬಿಜೆಪಿಗೆ ಸೇರಲಿದ್ದಾರೆ ಎಂದು ಹೇಳಿಕೆ ನೀಡಿರುವುದು ಅಚ್ಚರಿ ಮೂಡಿಸಿತು. ಎಂಜಿನೀಯರಿಂಗ್‌ ಯೋಜನೆಗಳನ್ನು ಕಾರ್ಯಗತಗೊಳಿಸವ ಅನುಭವ ಹೊಂದಿರು ಶ್ರೀಧರನ್‌ಗೆ ಪ್ರಜಾಪ್ರಭುತ್ವ ನೀತಿ ರೂಪಿಸುವ ಅನುಭವವಿಲ್ಲ. ರಾಜಕೀಯ ಹಿನ್ನೆಲೆಯಿಲ್ಲ. ರಾಜಕೀಯ ಎಂಬುದು ವಿಭಿನ್ನ ಜಗತ್ತು ಎಂದು ತರೂರ್ ಹೇಳಿದ್ದಾರೆ.
ಬೆರಳೆಣಿಕೆಯ ಸ್ಥಾನಗಳನ್ನು ಹೊರತುಪಡಿಸಿ ಬಿಜೆಪಿ ಗಂಭೀರ ಸ್ಪರ್ಧಿಯಲ್ಲ. ಮತ್ತು ಕಳೆದ ಬಾರಿ ಗೆದ್ದ ಒಂದು ಸ್ಥಾನವನ್ನು ಉಳಿಸಿಕೊಳ್ಳುವುದೇ ಅವರಿಗೆ ಕಷ್ಟವಾಗಿದೆ. 140 ಸದಸ್ಯರ ಕೇರಳ ವಿಧಾನಸಭೆಯ ಚುನಾವಣೆ ಈ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement