ಕೊರೊನಾ ವಿರುದ್ಧದ ಜಾಗತಿಕ ಹೋರಾಟಕ್ಕೆ ಭಾರತದ ನಾಯಕತ್ವ: ವಿಶ್ವಸಂಸ್ಥೆ

ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತದ ನಾಯಕತ್ವವನ್ನು ಶ್ಲಾಘಿಸಿದ ವಿಶ್ವಸಂಸ್ಥೆ, ವಿಶ್ವ ಮಟ್ಟದಲ್ಲಿ ಕೊವಿಡ್‌-೧೯ ಲಸಿಕೆ ಪೂರೈಕೆಗೆ ಭಾರತ ಮಾಡುತ್ತಿರುವ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದೆ.
ವಿಶ್ವ ಸಂಸ್ಥೆಗೆ ಕೊವಿಡ್‌-೧೯ ಲಸಿಕೆಯ ಡೋಸ್‌ಗಳನ್ನು ನೀಡಿದ್ದಕ್ಕೆ ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೊನಿಯೋ ಗುಟೆರಸ್‌ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್‌ಗೆ ಪತ್ರ ಬರೆದು ಕೃತಜ್ಞತೆ ಸಲ್ಲಿಸಿದ್ದಾರೆ. ಭಾರತವು ೧೫೦ ದೇಶಗಳಿಗೆ ಔಷಧಿಗಳು, ವೆಂಟಿಲೇಟರ್‌ಗಳು, ಪಿಪಿಇ ಕಿಟ್‌ಗಳನ್ನು ಪೂರೈಸಿದೆ. ವಿಶ್ವಸಂಸ್ಥೆಯು ತುರ್ತು ಬಳಕೆಗೆ ಅನುಮೋದನೆ ನೀಡಿದ ಎರಡು ಲಸಿಕೆಗಳಲ್ಲಿ ಒಂದನ್ನು ಭಾರತ ಅಭಿವೃದ್ಧಿಪಡಿಸಿ ಉತ್ಪಾದಿಸಿ ಇತರ ದೇಶಗಳಿಗೆ ಪೂರೈಕೆ ಮಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಭಾರತವು ಇತ್ತೀಚಿಗೆ ೨ ಲಕ್ಷ ಕೊರೊನಾ ಡೋಸ್‌ಗಳನ್ನು ಕೊಡುಗೆಯಾಗಿ ನೀಡಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ...: ಭಾರೀ ಮಳೆ-ಬಿರುಗಾಳಿಯ ನಡುವೆ ಹಸಿರು ಬಣ್ಣಕ್ಕೆ ತಿರುಗಿದ ದುಬೈನ ಆಕಾಶ...!

ನಿಮ್ಮ ಕಾಮೆಂಟ್ ಬರೆಯಿರಿ

advertisement