ದೆಹಲಿಯಲ್ಲಿ ಉನ್ನತಮಟ್ಟದ ಅಧಿಕಾರಿಗಳ ಜತೆ ಸಚಿವ ಜಾರಕಿಹೊಳಿ ಸಭೆ

ನವ ದೆಹಲಿ: ಜಲ ಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಅವರ ನೇತೃತ್ವದಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಉನ್ನತಮಟ್ಟದ ಸಭೆ ನಡೆಯಿತು.
ಸಭೆಯಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಸೀನಿಯರ್ ಅಡ್ವೋಕೇಟ್ ಮೋಹನ ಕಾತರಕಿ, ಅಡ್ವೋಕೇಟ್ ವಿ.ಎನ್.ರಘುಪತಿ, ನಿಶಾಂತ ಪಾಟೀಲ್, ರಾಜೇಶ್ವರ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನಿಲ್ ಕುಮಾರ್, ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯ ಮತ್ತು ಅಂತಾರಾಜ್ಯ ಮಟ್ಟದ ಜಲ ವ್ಯಾಜ್ಯದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ವಿಶೇಷವಾಗಿ ಕಾವೇರಿ ಕೊಳ್ಳದಲ್ಲಿ ನೀರು ಉಪಯೋಗ ಮಾಡುವ ಬಗ್ಗೆ ಚರ್ಚೆಯಾಗಿದೆ. ಆಂಧ್ರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಅಕ್ಕಪಕ್ಕದ ರಾಜ್ಯಗಳ ಕುರಿತಂತೆ ಗಂಭೀರವಾಗಿ ಚರ್ಚಿಸಿ ಮುಂದಿನ ತೀರ್ಮಾನದ ಬಗ್ಗೆ ಸುಧೀರ್ಘ ಸಮಾಲೋಚನೆ ನಡೆಸಲಾಯಿತು ಎಂದು ಬಳಿಕ ಸಚಿವ ಜಾರಕಿಹೊಳಿ ಸುದ್ದಿಗಾರರಿಗೆ ತಿಳಿಸಿದರು.
ತಮಿಳುನಾಡಿನಲ್ಲಿ ಶಂಕುಸ್ಥಾಪನೆಗೊಂಡ ಯೋಜನೆ ಕುರಿತಂತೆ ಪ್ರತಿಕ್ರಿಯಿಸಿ, ಆ ಯೋಜನೆಯಿಂದ ರಾಜ್ಯಕ್ಕೆ ಯಾವುದೇ ತೊಂದರೆ ಇಲ್ಲ. ಸಿಎಂ ನೇತೃತ್ವದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯದ ಹಿತಕ್ಕಾಗಿ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement