ನಂದಿಗ್ರಾಮದಿಂದ ಮಾತ್ರ ಸ್ಪರ್ಧಿಸುವಿರಾ: ಮಮತಾಗೆ ಬಿಜೆಪಿ ಸವಾಲು

ಕೋಲ್ಕತ್ತಾ: ವಿಜಯದ ವಿಶ್ವಾಸವಿದ್ದರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಮಾತ್ರ ಸ್ಪರ್ಧಿಸುವುದಾಗಿ ಘೋಷಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬಿಜೆಪಿ ಸವಾಲು ಹಾಕಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯವರ್ಗಿಯಾ ಅವರು, ನೀವು ನಂದಿಗ್ರಾಮದಿಂದ ಮಾತ್ರ ಸ್ಪರ್ಧಿಸುತ್ತೀರಾ ಎಂಬುದರ ಕುರಿತು ಘೋಷಣೆ ಮಾಡುವಂತೆ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸಿದರು.
ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಘೋಷಿಸಿಲ್ಲ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರವೇ ತನ್ನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಜನವರಿಯಲ್ಲಿ ನಂದಿಗ್ರಾಮದಲ್ಲಿ ನಡೆದ ಟಿಎಂಸಿ ಸಮಾವೇಶದಲ್ಲಿ ಬ್ಯಾನರ್ಜಿ ತಾವು ಇಲ್ಲಿಂದಲೂ ಸ್ಪರ್ಧಿಸುವುದಾಗಿ ಘೋಷಿಸಿದ್ದರು.ಹೀಗಾಗಿ ವಿಜಯ ವರ್ಗಿಯಾ ತಮ್ಮ ಟ್ವೀಟ್‌ನಲ್ಲಿ “ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಆದರೆ, ಅವರು ಇಲ್ಲಿಂದ ಮಾತ್ರ ಸ್ಪರ್ಧಿಸುವುದಾಗಿ ಹೇಳಿಲ್ಲ. ಅವರಿಗೆ ಗೆಲುವಿನ ವಿಶ್ವಾಸವಿದ್ದರೆ ನಂದಿಗ್ರಾಮದಿಂದ ಮಾತ್ರ ಸ್ಪರ್ಧಿಸುವುದಾಗಿ ಘೋಷಣೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಅಲ್ಲದಿದ್ದರೆ, ನೀವು ನಂದಿಗ್ರಾ ಕ್ಷೇತ್ರವನ್ನು ನಂಬುವುದಿಲ್ಲ ಎಂದು ಅರ್ಥವಾಗುತ್ತದೆ ಎಂದೂ ಮಮತಾ ಅವರಿಗೆ ಹೇಳಿದ್ದಾರೆ.
ವಿಶೇಷ ಆರ್ಥಿಕ ವಲಯಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂದಿನ ಎಡಪಂಥೀಯ ಸರ್ಕಾರದ ಯೋಜನೆಯ ನಂತರ 2007 ರಲ್ಲಿ ನಂದಿಗ್ರಾಮ ಕೃಷಿ-ವಿರೋಧಿ ಸ್ವಾಧೀನ ಚಳವಳಿಗೆ ಸಾಕ್ಷಿಯಾಯಿತು.
ಇದೇ ಚಳವಳಿ ಬಳಸಿಕೊಂಡೇ ಟಿಎಂಸಿ ೨೦೧೧ರಲ್ಲಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಅಧಿಕಾರಕ್ಕೆ ಬರುವ ಮೂಲಕ ಎಡಪಕ್ಷಗಳ 34 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತು.
2016ರಲ್ಲಿ ಪೂರ್ವ ಮಿಡ್ನಾಪುರ ಜಿಲ್ಲೆಯ ನಂದಿಗ್ರಾಮ ಕ್ಷೇತ್ರವನ್ನು ಅಂದಿನ ಟಿಎಂಸಿ ಪ್ರಭಾವಿ ನಾಯಕ ಸುವೆಂದು ಅಧಿಕಾರಿ ಗೆದ್ದರು, ಅವರು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದು, ಮಮತಾ ಬ್ಯಾನರ್ಜಿ ನಂದಿ ಗ್ರಾಮದಿಂದ ಸ್ಪರ್ಧಿಸಿದರೆ 50,000 ಮತಗಳಿಂದ ಸೋಲಿಸುವುದಾಗಿ ಸಾರ್ವಜನಿಕವಾಗಿ ಘೋಷಿಸಿದ್ದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ಡಿಜಿಟಲ್‌ ಕರೆನ್ಸಿ ಇನ್ಮುಂದೆ ರಿಯಾಲಿಟಿ..: ಡಿಸೆಂಬರ್‌ 1ರಂದು ಬೆಂಗಳೂರು ಸೇರಿ ದೇಶದ 4 ಮಹಾನಗರಗಳು, 4 ಬ್ಯಾಂಕ್‌ಗಳಲ್ಲಿ ಪ್ರಾಯೋಗಿಕವಾಗಿ ಡಿಜಿಟಲ್ ಕರೆನ್ಸಿ ಆರಂಭ

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement