ಬೆಂಗಳೂರು: ಮೀಸಲಾತಿ ನೀಡಬೇಕೆನ್ನುವುದರಲ್ಲಿ ನನ್ನ ಸಂಪೂರ್ಣ ಬೆಂಬಲ ಇದೆ. ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದಿರುವ, ಕಡುಬಡವರಾಗಿರುವ ವೀರಶೈವ-ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗಲೇಬೇಕು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಇದಕ್ಕೆ ನಮ್ಮ ಅಭ್ಯಂತರ ಇಲ್ಲವೇ ಇಲ್ಲ. ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗಲೇ , ಮೀಸಲಾತಿ ಕುರಿತಂತೆ ಸಮಿತಿ ರಚಿಸಿದ್ದರು. ಆಗ ವರದಿ ಬರುವ ಮುಂಚೆಯೇ ರಾಜಕೀಯ ಬದಲಾವಣೆಗಳು ನಡೆದವು. ಎಂದರು.
ಈಗಲೂ ನಾವು ಮೀಸಲಾತಿಗಾಗಿ ಸರ್ಕಾರ ತಡ ಮಾಡುತ್ತಿಲ್ಲ. ಅದಕ್ಕಾಗಿ ಪರಿಶೀಲನೆ ನಡೆಯುತ್ತಿದೆ. ಖಂಡಿತವಾಗಿ ಮೀಸಲಾತಿ ಸಿಕ್ಕೇ ಸಿಗುತ್ತದೆ ಎಂಬ ಭರವಸೆಯಿದೆ. ಮೀಸಲಾತಿ ಕಲ್ಪಿಸುವ ಕುರಿತಂತೆ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ನಮ್ಮ ಮೇಲೆ ವಿಶ್ವಾಸ ಇಡಿ ಎಂದು ಮನವಿ ಮಾಡಿದರು.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ನಿಮ್ಮ ಕಾಮೆಂಟ್ ಬರೆಯಿರಿ