ಮಥುರಾ ಕೃಷ್ಣ ಜನ್ಮಭೂಮಿ: ಕೋರ್ಟ್‌ನಲ್ಲಿ‌ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿ

ಮಥುರಾ: ಶ್ರೀಕೃಷ್ಣನ ಜನ್ಮಸ್ಥಳ ಮಥುರಾದ ದೇವಾಲಯದ ಪಕ್ಕದ ೧೭ನೇ ಶತಮಾನದ ಮಸೀದಿಯನ್ನು ಸ್ಥಳಾಂತರಿಸುವಂತೆ ಕೋರಿ ಸ್ಥಳಿಯ ನ್ಯಾಯಾಲಯದಲ್ಲಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಅರ್ಜಿಗಳ ವಿಚಾರಣೆಗೆ ನ್ಯಾಯಾಲಯ ದಿನಾಂಕವನ್ನೂ ನಿಗದಿಪಡಿಸಿದೆ.
ಸಿವಿಲ್‌ ನ್ಯಾಯಾಧೀಶ ನೇಹಾ ಬನೌಡಿಯಾ ಮಾರ್ಚ್‌ ೧೦ಕ್ಕೆ ವಿಚಾರಣೆ ನಡೆಸಲಿದ್ದಾರೆ. ವಕೀಲ ಶೈಲೇಂದ್ರ ಸಿಂಗ್‌ ಮತ್ತು ಹಿಂದೂ ಸೇನಾ ಮುಖ್ಯಸ್ಥ ಮನೀಶ್‌ ಯಾದವ್‌ ಅರ್ಜಿ ಸಲ್ಲಿಸಿದ್ದಾರೆ. ಮಥುರಾದ ಕತ್ರ ಕೇಶವದೇವ ದೇವಸ್ಥಾನದ ೧೩.೩೭ ಎಕರೆ ಭೂಮಿಯಲ್ಲಿ ಶಾಹಿ ಈದಗಾ ಮಸೀದಿಯನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವವರು ೧ ತಿಂಗಳೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   2020ರ ಜಾನುವಾರು ಕಳ್ಳಸಾಗಣೆ ಪ್ರಕರಣ: ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಸಹಾಯಕ ಅನುಬ್ರತಾ ಮೊಂಡಲ್ ಬಂಧಿಸಿದ ಸಿಬಿಐ

ನಿಮ್ಮ ಕಾಮೆಂಟ್ ಬರೆಯಿರಿ

advertisement